
ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸಿದೆ. ತಮಿಳುನಾಡಿನ ಮೂಲಕ ಕರ್ನಾಟಕದ ಗುಂಡ್ಲುಪೇಟೆಗೆ ಶುಕ್ರವಾರ ಬೆಳಗ್ಗೆ ಆಗಮಿಸಿರುವ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೆಕ್ಕನಳ್ಳ ಕಾಡಿನ ದಾರಿಯಲ್ಲೇ ನಿಂತು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದರು.
ಕಾಫಿ-ತಿಂಡಿ ಮಾಡಲೆಂದು ಮಾರ್ಗಮಧ್ಯೆ ಗುಂಡ್ಲುಪೇಟೆಯ ಹಂಗಳ ಗ್ರಾಮದ ಖಾಸಗಿ ರೆಸಾರ್ಟ್ಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಕರೆದೊಯ್ದರು. ಬಳಿಕ ಗುಂಡ್ಲುಪೇಟೆಯತ್ತ ಹೊರಟರು. ಗುಂಡ್ಲುಪೇಟೆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಭಾವಚಿತ್ರದ ಬ್ಯಾನರ್, ಫ್ಲೆಕ್ಸ್ಗಳೇ ರಾರಾಜಿಸುತ್ತಿವೆ.



