Monday, November 25, 2024
Homeಸುದ್ದಿಗಳುರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಿಡಿದೆದ್ದ ಕರವೇ ಸಮಸ್ಯೆ ಬಗೆಹರಿಸದ್ದಿದ್ದರೆ ಉಗ್ರ ಹೋರಾಟದ...

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಿಡಿದೆದ್ದ ಕರವೇ ಸಮಸ್ಯೆ ಬಗೆಹರಿಸದ್ದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ಜಿಲ್ಲಾ ಕಾರ್ಯದರ್ಶಿ- ರಘು ಪಾಳ್ಯ

 

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಿಡಿದೆದ್ದ ಕರವೇ

ಸಮಸ್ಯೆ ಬಗೆಹರಿಸದ್ದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ಜಿಲ್ಲಾ ಕಾರ್ಯದರ್ಶಿ- ರಘು ಪಾಳ್ಯ

ಆಲೂರು : ರಾಷ್ಟ್ರೀಯ ಹೆದ್ದಾರಿ 75 ಹಾಸನದಿಂದ ಮಾರನಹಳ್ಳಿ ವರೆಗೆ ನಡೆಯುತ್ತಿರುವ ಚತುಷ್ಪತ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕದಿಂದ ಕೂಡಿದ್ದು ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ತಿಳಿಸಿದ್ದಾರೆ.

ಭಾನುವಾರ ತಾಲೂಕಿನ ಪಾಳ್ಯ ಸಮೀಪ ಕಣದಳ್ಳಿ ಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಪಡಿಸುತ್ತೇವೆ ಎಂದು ಮಾತು ಕೊಟ್ಟಿದ್ದ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮಾತಿಗೆ ತಪ್ಪಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಿಂದ ಕಣದಲ್ಲಿ ಮಗ್ಗೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟೀಕರಣ ಮಾಡಿಕೊಡುತ್ತೇವೆ ಎಂದು ಈ ಹಿಂದೆ ಭರವಸೆ ನೀಡಿದ್ದ ಗುತ್ತಿಗೆದಾರರು ಇದೀಗ ಸಾಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಬಹುತೇಕ ಕಡೆಗಳಲ್ಲಿ ಸರ್ವಿಸ್ ರಸ್ತೆಗಳು ಇಲ್ಲದೆ ಬಡಾವಣೆ ಹಾಗೂ ಹಳ್ಳಿಗಳಿಂದ ಹೆದ್ದಾರಿ ಸಂಪರ್ಕಿಸಲು ಬರುವ ವಾಹನಗಳಿಗೆ ಸಮಸ್ಯೆಯಾಗಿದೆ ಜೊತೆಗೆ ಅವೈಜ್ಞಾನಿಕ ಕಾಮಗಾರಿಯಿಂದ ಹಲವು ಕಡೆಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಇದಿಕ್ಕೆ ಗುತ್ತಿಗೆದಾರರೇ ನೇರ ಹೊಣೆಯಾಗುತ್ತಾರೆ. ಅಪಘಾತದಿಂದ ಸಂಭವಿಸುವ ದುರ್ಘಟನೆಗೆ ಪರಿಹಾರವನ್ನು ಗುತ್ತಿಗೆದಾರರೇ ಭರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಯನ್ನು ವಿವರಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿದಂತೆ ಇನ್ನಿತರರಿದ್ದರು.

 

RELATED ARTICLES
- Advertisment -spot_img

Most Popular