ಸಕಲೇಶಪುರ : ಸೆಪ್ಟೆಂಬರ್ ತಿಂಗಳ 15 ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಸಹಾಯಕ ನಿರ್ದೇಶಕರು ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಆನಂದಮೂರ್ತಿ ತಿಳಿಸಿದ್ದಾರೆ.
ಪಟ್ಟಣದಲ್ಲಿಂದು ಪತ್ರಿಕ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು ತಾಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳ ಅಧಿಕಾರಿಗಳು ಮತ್ತು ನೌಕರರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಎಲ್ಲಾ ಸಾರ್ವಜನಿಕರು ಭಾರತದ ಸಂವಿಧಾನದ ಪೀಠಿಕೆಯ ಬಗ್ಗೆ ಅರಿವು ಪಡೆಯಲು ಹಾಗೂ ಸಂವಿಧಾನದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳಲು ತಮ್ಮ ವಿವರಗಳನ್ನು ರಿಜಿಸ್ಟರ್ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
https://thepreamble-swdkar.in/register/ ಲಿಂಕ್ ಬಳಸಿ ತಮ್ಮ ಮೊಬೈಲ್ ಫೋನ್ ಗಳಲ್ಲಿ ವಿವರಗಳನ್ನು ಕೂಡಲೇ ರಿಜಿಸ್ಟರ್ ಮಾಡಿಕೊಂಡು ರಿಜಿಸ್ಟರ್ ಆಗಿರುವ ಬಗ್ಗೆ ಬರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.