ಶಿವಕುಮಾರ ಸ್ವಾಮಿಗಳ ಸೇವೆ ಅನನ್ಯ – ಪ್ರತಿಭಾ ಮಂಜುನಾಥ್
ಬೆಳಗೋಡು ಹೋಬಳಿ ವೀರಶೈವ ಲಿಂಗಾಯತ ಯುವ ಸೇನೆ ವತಿಯಿಂದ ಬಾಗೆ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜನೆ
ಸಕಲೇಶಪುರ : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಸೇವೆ ಎಲ್ಲರಿಗೂ ಸ್ಫೂರ್ತಿ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಪತ್ನಿ ಪ್ರತಿಭಾ ಮಂಜುನಾಥ್ ಹೇಳಿದರು.
ಸೋಮವಾರ ತಾಲೂಕಿನ ಬಾಗೆ ಗ್ರಾಮದಲ್ಲಿ ವೀರಶೈವ ಲಿಂಗಾಯತ ಯುವ ಸೇನೆ ಬೆಳಗೋಡು ಹೋಬಳಿ ಘಟಕದ ವತಿಯಿಂದ ಆಯೋಜಿಸಿದ್ದ ಡಾ ಶಿವಕುಮಾರ ಸ್ವಾಮಿಗಗಳ 117ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಿವಕುಮಾರ ಸ್ವಾಮೀಜಿಯು ಇಡೀ ಜೀವತಾವಧಿಯನ್ನು ಸಮಾಜಕ್ಕೆ ಮೀಸಲಿಟ್ಟರು. ಶ್ರೀಗಳು ಜಾತಿ, ಧರ್ಮ ಬೇಧ ಮರೆತು ಸಮಾಜದ ಎಲ್ಲರಿಗೂ ವಿದ್ಯೆ ನೀಡಿದರು. ಅನ್ನ, ವಸತಿ, ಶಿಕ್ಷಣಕ್ಕೆ ಒತ್ತು ಕೊಟ್ಟು ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದರು’ ಎಂದು ಸ್ಮರಿಸಿದರು.
ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಮಾತನಾಡಿ,ಬಸವಣ್ಣರ ಕಾಯಕವೇ ಕೈಲಾಸ ತತ್ವದಲ್ಲಿ ನಂಬಿಕೆಯಿಟ್ಟಿದ್ದ ಶ್ರೀಗಳು ತ್ರಿವಿಧ ದಾಸೋಹದಲ್ಲಿ ಧರ್ಮ, ಜಾತಿ, ಮತದ ಬೇಧವಿಲ್ಲದೆ ಮಕ್ಕಳಿಗೆ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಲಕ್ಷಾಂತರ ಮಂದಿಯ ಹಸಿವು ನೀಗಿಸಿ ಸಮಾಜದ ಉಳಿವಿಗೆ ಜ್ಞಾನ ಗಂಗೆ ಹರಿಸಿದರು. ಅವರ ನಿಸ್ವಾರ್ಥ ಸೇವೆ ಎಲ್ಲರಿಗೂ ಮಾದರಿ’ ಎಂದು ಅಭಿಪ್ರಾಯಪಟ್ಟರು.ಸಂಕಲಾಪುರ ಮಠದ ಧರ್ಮರಾಜೇಂದ್ರ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ಬೆಳಗೋಡು ಹೋಬಳಿ ಅಧ್ಯಕ್ಷ ನಾಗೇಂದ್ರ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಸರ್ವರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂಧರ್ಭದಲ್ಲಿ ಬಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ಗೋಪಿನಾಥ್, ಹಾಸನ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ನೇತ್ರಾವತಿ ಮಂಜುನಾಥ್,ಬಿಜೆಪಿ ಜಿಲ್ಲಾ ಮಾಜಿ ಕಾರ್ಯಧ್ಯಕ್ಷ ಲೋಹಿತ್ ಜಂಬರಡಿ, ಹಾನುಬಾಳು ವಿನಾಯಕ ವಿದ್ಯಾ ಸಂಸ್ಥೆಯ ಹರೀಶ್ ಕಾಡುಮಕ್ಕಿ, ಮುಖಂಡರಾದ ಪರಮೇಶ್, ವಿರೂಪಾಕ್ಷ, ಮಧು, ದಾರೇಶ್ ಸೇರಿದಂತೆ ಸಂಘಟನೆ ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.