ಹಾಸನ ಜಿಲ್ಲೆಯಲ್ಲಿ 20 ಅಭ್ಯರ್ಥಿಗಳಿಂದ 27 ನಾಮಪತ್ರ ಸಲ್ಲಿಕೆ
ಹಾಸನ :- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 20 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ.
193- ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಜೆ.ಡಿ.ಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಜೇಗೌಡ, ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿ ಶಿವಕುಮಾರ್, ಉತ್ತಮ ಪ್ರಜಾಕೀಯಾ ಪಾರ್ಟಿಯಿಂದ ಕಿರಣ್. ಟಿ.ಕೆ. ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
194- ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸವರಾಜ್, ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ್, ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
195-ಬೇಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಶಿವರಾಂ, ಬಿಜೆಪಿ ಅಭ್ಯರ್ಥಿ ಹೆಚ್.ಕೆ.ಸುರೇಶ್ ಹಾಗೂ ಜೆ.ಡಿ.ಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ತಲಾ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
196 -ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಒಂದು ನಾಮಪತ್ರ ಸಲ್ಲಿಸಿದರು. ಜೆ.ಡಿ.ಎಸ್ ಅಭ್ಯರ್ಥಿ ಸ್ವರೂಪ ಎರಡು ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಆರ್.ಜಿ.ಸತೀಶ್, ಪ್ರಜಾ ಚಕ್ರವ್ಯೂಹ ಪಾರ್ಟಿಯಿಂದ ಬಾಲರಾಜ್ ತಲಾ ಒಂದು ನಾಮಪತ್ರ ಸಲ್ಲಿಸಿದರು.
197-ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿ ಹೆಚ್.ಡಿ.ರೇವಣ್ಣ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಒಂದು ನಾಮಪತ್ರ ಹಾಗೂ ಕೆ.ಆರ್.ಎಸ್ ಪಕ್ಷದಿಂದ ನಾಗರಾಜ್ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
198-ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಹೆಚ್.ಯೋಗರಮೇಶ್ ಒಂದು ನಾಮಪತ್ರ ಸಲ್ಲಿಸಿದರು. ಜೆ.ಡಿ.ಎಸ್ ಅಭ್ಯರ್ಥಿ ಎ.ಮಂಜು ಅವರು ಎರಡು ನಾಮಪತ್ರ ಸಲ್ಲಿಸಿದರು. ಆಮ್ ಆದ್ಮಿ ಪಕ್ಷದಿಂದ ಬಿ.ಟಿ.ಜವರೇಗೌಡ ಒಂದು ನಾಮಪತ್ರ ಸಲ್ಲಿಸಿದ್ದಾರೆ.
199-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್ ಅಭ್ಯರ್ಥಿ ಹೆಚ್.ಕೆ.ಕುಮಾರಸ್ವಾಮಿ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್ಚನಾ ಎಂ.ಎಸ್. ಅವರು ತಿಳಿಸಿದ್ದಾರೆ.