Sunday, March 16, 2025
Homeಸುದ್ದಿಗಳು527 ಕೆ.ಜಿ. ರಕ್ತಚಂದನ ವಶ: ನಾಲ್ವರು ಬಂಧನ

527 ಕೆ.ಜಿ. ರಕ್ತಚಂದನ ವಶ: ನಾಲ್ವರು ಬಂಧನ

*527 ಕೆ.ಜಿ. ರಕ್ತಚಂದನ ವಶ: ನಾಲ್ವರು ಬಂಧನ*

********************************

ಬೆಂಗಳೂರು: ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ರಕ್ತಚಂದನ ಮರದ ತುಂಡುಗಳನ್ನು ಬೆಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

ರಕ್ತಚಂದನದ ತುಂಡುಗಳನ್ನು ತುಂಬಿಕೊಂಡು ಸಾಗಣಿಕೆ ಮಾಡುತ್ತಿದ್ದ ವಾಹನವನ್ನು ಖಚಿತ ಮಾಹಿತಿಯನ್ನು ಆಧರಿಸಿ ನಿಲ್ಲಿಸಿದ ಬೆಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ತಪಾಸಣೆ ಮಾಡಿದಾಗ 13 ರಕ್ತಚಂದನದ ತುಂಡುಗಳು ಪತ್ತೆಯಾಗಿವೆ.

ಸ್ಥಳದಲ್ಲೇ ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು ಗೂಡ್ಸ್ ವಾಹನ ಹಾಗೂ 527 ಕೆ.ಜಿ. ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ಇದ್ದು ಬಂಧನಕ್ಕೆ ಬಲೆ ಬೀಸಿದ್ದಾರೆ.

ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಇರುವ ಕಾರಣ ರಕ್ತಚಂದನವನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -spot_img

Most Popular