ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರುವುದು ಖಚಿತ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ
ಸಕಲೇಶಪುರ: ತಾಲೂಕಿನ ಹಾನುಬಾಳ್ ಹಾಗೂ ದೇವಾಲದಕೆರೆ ಗ್ರಾಮದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ರೋಡ್ ಷೋ ಉದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಕದರ್ಶಿ ಸಿ.ಟಿ ರವಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವುದಲ್ಲದೆ ರಾಷ್ಟ್ರದ ಭದ್ರತೆಯನ್ನು ಕಾಪಾಡಿದೆ. ಕೋವಿಡ್ ಲಾಕ್ ಡೌನ್ ಸಂಧರ್ಭದಲ್ಲಿ ಉಚಿತ ಲಸಿಕೆಗಳನ್ನು ನೀಡಿ ಜನರ ಆರೋಗ್ಯ ಕಾಪಾಡಿದೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಜನ ಜೆಡಿಎಸ್ ನ ಆಡಳಿತದಿಂದ ಬೇಸತ್ತಿದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿರುವ ಪಕ್ಷದ ಸಾಮಾನ್ಯ ಕಾರ್ಯಕರ್ತ ಸಿಮೆಂಟ್ ಮಂಜುನಾಥ್ ಗೆ ಹೆಚ್ಚಿನ ಬೆಂಬಲ ನೀಡುವುದರಲ್ಲಿ ಅನುಮಾನವಿಲ್ಲ. ಈ ಬಾರಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಎಚ್.ಎಂ ವಿಶ್ವನಾಥ್, ಬಿಜೆಪಿ ಮುಖಂಡರುಗಳಾದ ಅಮಿತ್ ಶೆಟ್ಟಿ, ಕೊಲ್ಲಹಳ್ಳಿ ಬಾಲು, ಸಂತೋಷ್ ಕೆಂಚಾಂಬ, ಮಂಜುನಾಥ್ ಸಂಘಿ, ರಂಗನಾಥ್, ಮುಂತಾದವರು ಹಾಜರಿದ್ದರು.