ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕುನಿಗನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಕಾರ್ಯಕರ್ತರು.
ಇನ್ನೆರಡು ದಿನಗಳಲ್ಲಿ ಮತ್ತಷ್ಟು ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಸಾಧ್ಯತೆ.
ಸಕಲೇಶಪುರ : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಸ್ಥಳೀಯ ಸ್ವಾಭಿಮಾನಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಅವರ ಮೇಲೆ ವಿಶ್ವಾಸವನ್ನಿಟ್ಟು ಸಕಲೇಶಪುರ ತಾಲೂಕು ಕುಣಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಹಲವಾರು ವರ್ಷಗಳಿಂದ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಜೆ. ಟಿ ಜಗದೀಶ್,ಚಂದ್ರಶೇಖರ್,ನಾಗೇಶ್,ಲೋಕೇಶ್,ನಾಗರಾಜ್, ಚಂದ್ರಣ್ಣ ಸೋಮೇಗೌಡ ಸೇರಿದಂತೆ ಮುಂತಾದವರು ಬಿಜೆಪಿ ಮುಖಂಡ ಬಾಳ್ಳುಪೇಟೆ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಇನ್ನು ಒಂದೆರಡು ದಿನಗಳಲ್ಲಿ ಕುಣಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರಲಿದ್ದಾರೆ ಎಂದು ಮುಖಂಡ ಮಲ್ಲಿಕಾರ್ಜುನ್ ವಾಸ್ತವ ನ್ಯೂಸ್ ಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ್, ಸಂತೋಷ್,ಪ್ರಕಾಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.