ಸಕಲೇಶಪುರ: ಸಕಲೇಶಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಸಿಮೆಂಟ್ ಮಂಜು ಆಯ್ಕೆಯಾದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೇಘನಾ, ಶಿರಸ್ತೇದಾರ್ ಉಮೇಶ್ ಭೇಟಿ ನೀಡಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ ಕಂದಾಯ ಇಲಾಖೆಯಲ್ಲಿ ಬಡವರ ಕೆಲಸಗಳು ಬೇಗನೆ ಆಗಬೇಕು, ಸಣ್ಣಪುಟ್ಟ ಕೆಲಸಗಳನ್ನು ಕೂಡಲೆ ಮಾಡಿಕೊಡಬೇಕು. ವಿನಾಕಾರಣ ಜನರನ್ನು ಅಲೆದಾಡಿಸುವುದನ್ನು ತಪ್ಪಿಸಬೇಕು ಹಾಗೂ ಮಿನಿವಿಧಾನಸೌಧದಲ್ಲಿ ಮಧ್ಯವರ್ತಿಗಳ ಹಾವಳಿ ಇರದಂತೆ ನೋಡಿಕೊಳ್ಳಬೇಕೆಂದು ತಹಶೀಲ್ದಾರ್ ಮೇಘನಾರವರಿಗೆ ಮನವಿ ಮಾಡಿದರು.
ತಾಜಾ ಸುದ್ದಿ