ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡಲಾಗಿದೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಸಂಘರ್ಷ ಇತ್ಯರ್ಥಗೊಂಡಂತಾಗಿದೆ.
ನೂತನ ಸಿಎಂ ಸಿದ್ದರಾಮಯ್ಯ ಎಂದು ಹೈಕಮಾಂಡ್ ನಿರ್ಧರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಅಲಂಕರಿಸಲಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿಯೇ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗಿದೆ.