Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ :ಕಾಮಗಾರಿ ವೀಕ್ಷಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ :ಕಾಮಗಾರಿ ವೀಕ್ಷಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ :ಕಾಮಗಾರಿ ವೀಕ್ಷಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ :ಪಟ್ಟಣದಿಂದ ಅರಕೆರೆ, ಬ್ಯಾಕರವಳ್ಳಿ ಸಂಪರ್ಕಿಸುವ ರಸ್ತೆ ಕಾಮಗಾರಿಯನ್ನು ಗುರುವಾರ ಶಾಸಕ ಸಿಮೆಂಟ್ ಮಂಜುನಾಥ್ ವೀಕ್ಷಣೆ ಮಾಡಿದರು.

 ಹಲವಾರು ವರ್ಷಗಳಿಂದ ಆನೆಮಹಲ್ ಸಮೀಪ ರಸ್ತೆ ಗುಂಡಿ ಬಂದಿದ್ದು ವಾಹನ ಸವಾರರು ಆಗ ಸಾರ್ವಜನಿಕರು ತೀವ್ರ ಪರದಾಟ ನಡೆಸುತ್ತಿದ್ದರು. ಇದೀಗ ನೂತನವಾಗಿ ಶಾಸಕರಾಗಿ ಆಯ್ಕೆಯಾದ ಸಿಮೆಂಟ್ ಮಂಜುನಾಥ್ ರವರ ಮುತುವರ್ಜಿಯಿಂದ ಹಲವು ವರ್ಷಗಳಿಂದ ಬಿದ್ದಿದ್ದ ಗುಂಡಿಗೆ ಮುಕ್ತಿ ದೊರಕಿದೆ. ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕರು ಇಂದು ಅಧಿಕಾರಿಗಳ ಜೊತೆ ಕಾಮಗಾರಿ ಸ್ಥಳಕ್ಕೆ ಆಗಮಿಸಿ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು.

 ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಿತ್ತಿರುವ ಶಾಸಕರು ರಸ್ತೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲಸೌಕರ್ಯ ಕೊರತೆವಿರುವ ಭಾಗಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

RELATED ARTICLES
- Advertisment -spot_img

Most Popular