Thursday, January 23, 2025
Homeಸುದ್ದಿಗಳುಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ತುಮಕೂರು: ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಹೌದು ನೊಂದಣಿಗಳ‌ ಮಹಾಪರಿವಿಕಕ್ಷರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರು ಡಾ. ಮಮತಾ ಅವರು ಈ ಆದೇಶ‌ ನೀಡಿದ್ದಾರೆ. ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಈ ಬಗ್ಗೆ ಮಂಜುನಾಥ್ ಎಂಬುವರು ದೂರು ನೀಡಿದ್ದರು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.

RELATED ARTICLES
- Advertisment -spot_img

Most Popular