ಹೆತ್ತೂರು: ವಿಶ್ವ ಬಾಲಕಾರ್ಮಿಕ ನಿಷೇಧ ದಿನಾಚರಣೆಹೆತ್ತೂರು
ಹೆತ್ತೂರು : ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕರ ವಿರೋಧಿ ದಿನದ ಕುರಿತು ವಿಶೇಷ ಉಪನ್ಯಾಸವನ್ನು ಸಂಸ್ಥೆಯ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವೇದವತಿ ಕೆ. ನೀಡಿದರು. ಬಾಲ ಕಾರ್ಮಿಕರ ಶೋಷಣೆಯ ವಿವಿಧ ಆಯಾಮಗಳು, ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿದರೆ ಇರುವ ಶಿಕ್ಷೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಬೆಟ್ಟದಳ್ಳಿ ಮಂಜುನಾಥ್ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್ ಕಾರ್ಯಕ್ರಮ ನಿರ್ವಹಿಸಿದರು.


                                    
