ಸಕಲೇಶಪುರ : ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ ಎಂದು ಯೋಗ ಪಟು ಪ್ರಶಾಂತ್ ಹೇಳಿದರು.
ಜೂನ್ 21ರಂದು ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ ಎಂದರು.
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಬಹಳ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ.
ಈ ಸಂದರ್ಭದಲ್ಲಿ ಸತ್ಯನಾರಾಯಣ, ಯೋಗ ಚೇತನ ಟ್ರಸ್ಟಿನ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್, ಪತಂಜಲಿ ಯೋಗ ಸಮಿತಿಯ ಸಂಗಮೇಶ್, ಶಿವಣ್ಣ, ಪುಟ್ಟಸ್ವಾಮಿ, ಸೋಮಣ್ಣ, ವೀಣಾ, ಜಯರಾಜ್, ಇನ್ನಿತರರು ಇದ್ದರು