ರಾತ್ರೋ ರಾತ್ರಿ ಕ್ರಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿ: ಆಸ್ಪತ್ರೆಯ ರೋಗಿಗಳ ಯೋಗಕ್ಷೇಮ ವಿಚಾರಿಸಿದ ಶಾಸಕ
ಸಕಲೇಶಪುರ: ಕ್ರಾಫರ್ಡ್ ಆಸ್ಪತ್ರೆ ಸೇವೆಗಳ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳ ಬರುತ್ತಿರುವ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು ಆಸ್ಪತ್ರೆಯ ಪ್ರತಿವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಕ್ರಾಫರ್ಡ್ ಆಸ್ಪತ್ರೆಯ ವೈದ್ಯಾಧಿಕಾರಿ ಅರುಣ್ ರವರಿಗೆ ರೋಗಿಗಳ ಸೇವೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಆಗಬಾರದು.ಆಸ್ಪತ್ರೆಗೆ ಮತ್ತಷ್ಟು ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಸಿಮೆಂಟ್ ಮಂಜುರವರು ಈ ಕಾರ್ಯಕ್ಕೆ ರೋಗಿಗಳು ಪ್ರಶಂಸೆ ವ್ಯಕ್ತಪಡಿಸಿದರು.