ಹಲಸುಲಿಗೆ : ಘನ ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ.
ಶಾಸಕ ಸಿಮೆಂಟ್ ಮಂಜುನಾಥ್ ರಿಂದ ಘಟಕಕ್ಕೆ ಚಾಲನೆ.
ಸಕಲೇಶಪುರ : ತಾಲೂಕುಕಿನ ಬೆಳಗೋಡು ಹೋಬಳಿ ಹಲಸುಲಿಗೆ ಗ್ರಾಮ ಪಂಚಾಯಿತಿಯಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕದ ಉದ್ಘಾಟನೆ ಬುಧುವಾರ ಜರುಗಿತು.
ಘಟಕ ಉದ್ಘಾಟನೆ ನೆಡೆಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಹಾಕುವುದರಿಂದ ಆರೋಗ್ಯ ಸಂಭಂಧಿ ರೋಗಗಳು ಬರುತ್ತವೆ. ಹಾಗಾಗಿ ನಮ್ಮ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಗಿದ್ದು ನಮ್ಮ ಕರ್ತವ್ಯ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಜನರೊಂದಿಗೆ ಸೌಜನ್ಯದಿಂದ ವರ್ತಿಸಿ ಕಾರ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ,ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಆದಿತ್ಯ,ಹರೀಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೃಷ್ಣ ಉಪಾಧ್ಯಕ್ಷ ನೇತ್ರಾವತಿ ಸೇರಿದಂತೆ ಸದಸ್ಯರು, ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.