Sunday, November 24, 2024
Homeಸುದ್ದಿಗಳುಸಕಲೇಶಪುರಎಸ್ ಡಿ ಪಿ ಐ ಪಕ್ಷದ ವತಿಯಿಂದ ಮಹಾರಾಷ್ಟ್ರದಲ್ಲಿ RPF ಯೋಧನ ಕೋಮು ದ್ವೇಷ ಹಾಗೂ...

ಎಸ್ ಡಿ ಪಿ ಐ ಪಕ್ಷದ ವತಿಯಿಂದ ಮಹಾರಾಷ್ಟ್ರದಲ್ಲಿ RPF ಯೋಧನ ಕೋಮು ದ್ವೇಷ ಹಾಗೂ ರಾಷ್ಟ್ರದ ವಿವಿಧಡೆ ಸಂಘ ಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ ಪ್ರತಿಭಟನೆ

ಸಕಲೇಶಪುರ : ಸಂಘಪರಿವಾರ ಹರಡಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುವಂತಾಗಿದೆ ಎಸ್ ಡಿ ಪಿ ಜಿಲ್ಲಾ ಮುಖಂಡ ಇಮ್ರಾನ್ ಅರೇಹಳ್ಳಿ ಹೇಳಿದರು.

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಆರ್‌ಪಿಎಫ್ ಯೋಧ ನಾಲ್ವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಹಾಸನ ಜಿಲ್ಲಾ ಗ್ರಾಮಾಂತರ ಎಸ್ಟಿಪಿಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಣಿಪುರದಲ್ಲಿ ಜಾನಾಂಗೀಯ ಕಲಹ, ಹರಿಯಾಣಾದಲ್ಲಿ ಕೋಮು ಗಲಭೆ, ಮಹಾರಾಷ್ಟ್ರದಲ್ಲಿ RPF ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಹಿಂಸಾಚಾರ ಹಬ್ಬಿಕೊಂಡಿದೆ. ಇಂತಹ ಸನ್ನಿವೇಶಕ್ಕೆ ಕಾರಣವಾದ ಬಿಜೆಪಿ ಮತ್ತು ಸಂಘಪರಿವಾರದ ದ್ವೇಷದ ರಾಜಕಾರಣವನ್ನು ನೋಶಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಹರಿಯಾಣಾದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಗೋ ರಕ್ಷಣೆ ಹೆಸರಿನಲ್ಲಿ ಅಮಾಯಕರನ್ನು ಕೊಂದು ತಲೆ ಮರೆಸಿಕೊಂಡಿರುವ ಮೋನು ಮನೆಸರ್ ಹರಿಬಿಟ್ಟ ಪ್ರಚೋದನಕಾರಿ ವೀಡಿಯೊ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಆತ ಹಾಕಿದ ಸವಾಲು ಮುಖ್ಯ ಕಾರಣವಾಗಿದೆ. ಇಷ್ಟೆಲ್ಲ ಬೆಳವಣಿಗೆಗಳು ನಡೆದಿದ್ದರೂ ಅಲ್ಲಿನ ಪೊಲೀಸರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾಗಿದ್ದಾರೆ ಅಲ್ಲಿ ಮಸೀದಿಗಳಿಗೆ ಬೆಂಕಿ ಹಚ್ಚಿ ಒಬ್ಬರು ಗುರುಗಳನ್ನು ಕೊಲೆ ಮಾಡಲಾಗಿದೆ ಮತ್ತು 5 ಮಂದಿ ಅಮಾಯಕರು ಜೀವ ತೆತ್ತಿದ್ದಾರೆ ಎಂದು ಹೇಳಿದರು.

ಎಸ್ ಡಿ ಪಿ ಐ ಮುಖಂಡೆ ಫೌಝಿಯಾ ಹರ್ಷದ್ ಮಾತನಾಡಿ, ದೇಶದ ಎಲ್ಲೆಡೆ ಹಬ್ಬಿದ ದ್ವೇಷದ ವಿಷ ರೈಲ್ವೆ ಭದ್ರತಾ ಸಿಬ್ಬಂದಿಯ ತಲೆಗೂ ಹೊಕ್ಕಿದ್ದು ದುರಂತ. ಮಹಾರಾಷ್ಟ್ರದಲ್ಲಿ RPF ಯೋಧ ಚೇತನ್ ಸಿಂಗ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತನ್ನ ಉನ್ನತ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ನಂತರ, ಭೋಗಿಯಿಂದ ಭೋಗಿಗೆ ಹೋಗಿ ಮುಸ್ಲಿಂ ಪ್ರಯಾಣಿಕರನ್ನು ಹುಡುಕಿ 3 ಜನ ಅಮಾಯಕ ಮುಸ್ಲಿಂ ಪ್ರಯಾಣಿಕರನ್ನು ಕೊಂದಿದ್ದಾನೆ. ಇದು ದೇಶದಲ್ಲಿ ಸಂಘಪರಿವಾರದ ಜೊತೆ ಸೇರಿಕೊಂಡು ಗೋದಿ ಮಾಧ್ಯಮ ಹಬ್ಬಿರುವ ದ್ವೇಷದ ಪರಿಣಾಮ ಎಂಬುದು ಹತ್ಯಾಕಾಂಡದ ನಂತರ ಯೋಧ ಮಾತನಾಡಿರುವ ಮಾತುಗಳಿಂದ ಸ್ಪಷ್ಟವಾಗುತ್ತದೆ ಎಂದರು.

ರಾಷ್ಟ್ರದಲ್ಲಿ ಸಂಘ ಪರಿವಾರ ನಡೆಸುತ್ತಿರುವ  ಎಲ್ಲ ಘಟನೆಗಳನ್ನು ಎಸ್.ಡಿ.ಪಿ.ಐ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಮತ್ತು ಇಂತಹ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಎಸ್ ಡಿ ಪಿ ಐ ಪಕ್ಷದ ಮುಖಂಡರಾದ ಸಲ್ಮಾನ್ ಅರೇಹಳ್ಳಿ, ಮಂಜರಾಬಾದ್ ಸಾಧಿಕ್, ವಾಜಿದ್ ಮುಸ್ತಫ ಕಡ್ಲೂರು ವಹಿಸಿದ್ದರು.

RELATED ARTICLES
- Advertisment -spot_img

Most Popular