Wednesday, April 16, 2025
Homeಸುದ್ದಿಗಳುಅರಸೀಕೆರೆಯಲ್ಲಿ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಅರಸೀಕೆರೆಯಲ್ಲಿ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಬಸ್ ಅಪಘಾತವಾಗಿದ್ದು, ದುರಂತವಾಗಿದ್ದು, ಸುಮಾರು 9 ಜನ ತೀರಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು*

ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಟ್ಯಾಂಕರ್ ಮತ್ತು ಬಸ್ಸುಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

RELATED ARTICLES
- Advertisment -spot_img

Most Popular