Sunday, November 24, 2024
Homeಸುದ್ದಿಗಳುಸಕಲೇಶಪುರಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢ

ಸಕಲೇಶಪುರ : ಕ್ರೀಡೆಯಲ್ಲಿ ಭಾಗವಹಿಸಿದರೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು ಪತ್ರಕರ್ತ ಅರುಣ್ ರಕ್ಷಿದಿ ಹೇಳಿದರು.
ಪಟ್ಟಣದ ಸುಭಾಷ್ ಮೈದಾನದಲ್ಲಿ ರೋಟರಿ ವಿದ್ಯಾ ಸಂಸ್ಥೆ ಹಾಗೂ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ
ಯುವಪೀಳಿಗೆ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ತಮ್ಮ ಅಸ್ತಿತ್ವ ಅನಾವರಣಗೊಳಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕ್ರಿಯಾಶೀಲತೆ ವ್ಯಕ್ತಿತ್ವಕ್ಕೆ ಮೆರುಗು ನೀಡುತ್ತದೆ. ಸುಸಂಸ್ಕೃತ ವ್ಯಕ್ತಿತ್ವ ಸಮಾಜದ ಉನ್ನತಿಗೆ ಸಹಕಾರಿಯಾಗುತ್ತದೆ. ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಬೌದ್ಧಿಕ ಮೌಲ್ಯಗಳನ್ನು ತುಂಬಲು ಶ್ರಮಿಸಬೇಕು ಎಂದರು. ಪೂರ್ವಸಿದ್ಧತೆ ಇಲ್ಲದೆ ಉತ್ತಮ ಸಾಧನೆ ಮಾಡಲು ಸಾಧ್ಯವಿಲ್ಲ ಅದರಿಂದ, ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಹ ಅಭ್ಯಾಸವನ್ನು ಮೈಗೂಡಿಸಿಕೋಳ್ಳಬೇಕು ಎಂದು ತಿಳಿಸಿದರು.
ಬಿಇಒ ಪುಷ್ಪಲತಾ ಮಾತನಾಡಿ, ಕ್ರೀಡೆ ಮಾನವನ ಉನ್ನತಿಗೆ ಇರುವ ಅಪರೂಪದ ಹಾದಿ. ಶಿಕ್ಷಣದ ಜತೆಗೆ ಕ್ರೀಡೆ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ವಹಿಸಿದರೆ ರಾಷ್ಟ್ರ ಮಟ್ಟದಲ್ಲೂ ಯಶಸ್ಸು ಗಳಿಸಬಹುದು. ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ಆಟದ ಮೈದಾನದಲ್ಲಿ ಕ್ರೀಡೆ, ಆಟವೂ ಮುಖ್ಯ
ಯಶಸ್ಸಿಗಿಂತ ಭಾಗವಹಿಸುವಿಕೆ ಮುಖ್ಯ ಎಂದರು. ವಿದ್ಯಾರ್ಥಿಗಳು ಪ್ರತಿ ಹಂತದಲ್ಲಿ ಅಧ್ಯಾಪಕರ ಮಾರ್ಗದರ್ಶನ ಪಡೆದು ತಮ್ಮ ಭವಿಷ್ಯ ರೂಪಿಸುವತ್ತ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ರೋಟರಿ ಶಾಲೆಯ ಪ್ರಾಂಶುಪಾಲ ಭಾರ್ಗವ್, ಮಾನಸ ಶಾಲೆಯ ಮುಖ್ಯ ಶಿಕ್ಷಕ ಕೆ ದೇವರಾಜ್, ಜೆ ಎಸ್ ಎಸ್ ಶಾಲೆಯ ಆರಾಧ್ಯ ಇನ್ನಿತರರು ಇದ್ದರು

RELATED ARTICLES
- Advertisment -spot_img

Most Popular