ಸಕಲೇಶಪುರ : ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ. ಸಿ ಬಸ್ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿ ಒಬ್ಬರು ಮೃತ ಪಟ್ಟು ಹಲವರು ಗಾಯಗೊಂಡಿರುವ ಘಟನೆ ನೆಡೆದಿದೆ.
ಇಂದು ಮುಂಜಾನೆ ತಾಲೂಕಿನ ಬಾಗೆ ಗ್ರಾಮದ ಜೆಎಸ್ಎಸ್ ಶಾಲೆ ಸಮೀಪ ಅಪಘಾತ ನಡೆದಿದ್ದು ಬಸ್ಸಿನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ನಂತರ ಜೆಎಸ್ಎಸ್ ಶಾಲೆಯ ಕಾಂಪೌಂಡ್ ಗೆ ಗುದ್ದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕಿನ ಉದಯಪುರದ ಅಮೃತ್ ರಾಜ್ (34) ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ವರದಿಯಾಗಿದೆ.ಗಾಯಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಗಂಭೀರ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಬಸಕ್ಕೆ ಜಮೀನಿನಲ್ಲಿದ ವಾಸದ ಮನೆಗೂ ಕೂಡ ಹಾನಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ
ಘಟನೆ ಸಂಭಂದ ಸಕಲೇಶಪುರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.