ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಮತ್ತೆ ಮೂವರು ಹಿರಿಯ ನಾಯಕರಿಗೆ ಕೇಂದ್ರ ಸರ್ಕಾರ ಭಾರತ ರತ್ನ (Bharat Ratna) ಪ್ರಶಸ್ತಿ ಘೋಷಿಸಿದೆ.
ಭಾರತದ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್, ಭಾರತ ದೇಶದ ಹಸಿರು ಕ್ರಾಂತಿಯ ಹರಿಕಾರರೆಂದು ಪ್ರಸಿದ್ಧರಾಗಿರುವ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಭಾರತದ ಮಾಜಿ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಘೋಷಣೆ ಮಾಡಿದ್ದಾರೆ.