ಸಕಲೇಶಪುರ: ತಾಲೂಕಿನ ಹೆತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ನಾಗರಾಜ್ ಅವಿರೋಧವಾಗಿ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅನುಸೂಯ ಆಯ್ಕೆಯಾಗಿದ್ದಾರೆ. ಒಟ್ಟು 10 ಜನ ಸದಸ್ಯ ಬಲದ ಹೆತ್ತೂರು ಗ್ರಾ.ಪಂಯಲ್ಲಿ ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿಗೆ ಮೀಸಲಾಗಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ನಾಗರಾಜ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಇದೇ ರೀತಿ ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ ಮಹಿಳೆಗೆ ಮೀಸಲಾಗಿದ್ದು ಜೆಡಿಎಸ್ ಬೆಂಬಲಿತ ಅನುಸೂಯ ಒಬ್ಬರೇ ನಾಮಪತ್ರ ಸಲ್ಲಿದ್ದರಿಂದ ಅವಿರೋ‘ವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಹೆತ್ತೂರು ಗ್ರಾ.ಪಂ ಇತಿಹಾಸದಲ್ಲೆ ಇದೇ ಮೊದಲ ಬಾರಿಗೆ ಬಿಜೆಪಿ ಬೆಂಬಲಿತ ಸದಸ್ಯರೊರ್ವರು ಪರಿಶಿಷ್ಠ ಜಾತಿ ಮೀಸಲಾತಿಯಲ್ಲಿ ಆಯ್ಕೆಯಾಗಿದ್ದು ಪಕ್ಷದ ಕಾರ್ಯಕರ್ತರಲ್ಲಿ ಸಂತೋಷ ತಂದಿದೆ. ಚುನಾವಣಾ ಅಧಿಕಾರಿಯಾಗಿ ತಾ.ಪಂ ಸಹಾಯಕ ನಿರ್ದೇಶಕ ಆದಿತ್ಯ ಕಾರ್ಯನಿರ್ವಹಿಸಿದರು. ಶಾಸಕ ಸಿಮೆಂಟ್ ಮಂಜು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಸಹೋದರ ಯೋಗೇಶ್, ಬಿಜೆಪಿ ಮುಖಂಡರಾದ ವಳಲಹಳ್ಳಿ ಅಶ್ವಥ್, ಹೆತ್ತೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಗೌಡ, ಗ್ರಾ.ಪಂ ಸದಸ್ಯ ಡಿಲಾಕ್ಷ, ಉಮೇಶ್, ಮಲ್ಲೇಶ್ ಮುಂತಾದವರು ಹಾಜರಿದ್ದರು.