Sunday, November 24, 2024
Homeಸುದ್ದಿಗಳುಸಕಲೇಶಪುರಸತ್ತಿಗರಹಳ್ಳಿ ಅಂಬೇಡ್ಕರ್ ಭವನ ಸಮುದಾಯ ಉದ್ಘಾಟಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸತ್ತಿಗರಹಳ್ಳಿ ಅಂಬೇಡ್ಕರ್ ಭವನ ಸಮುದಾಯ ಉದ್ಘಾಟಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸತ್ತಿಗರಹಳ್ಳಿ ಅಂಬೇಡ್ಕರ್ ಭವನ ಸಮುದಾಯ ಉದ್ಘಾಟಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಶಾಸಕರಿಗೆ ಅಭೂತಪೂರ್ವ ಸ್ವಾಗತ ಕೋರಿದ ಗ್ರಾಮಸ್ಥರು

ಕಟ್ಟಾಯ :ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ’ ಎಂದು ಎಂದು  ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.

ಹಾಸನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾ ಯತ್, ಹಾಸನ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ನೂತನ ಸತ್ತಿಗರಹಳ್ಳಿ ಕಾಲೋನಿಯ ಅಂಬೇಡ್ಕರ್ ಸಮುದಾಯ ಭವನವನ್ನು  ಮಂಗಳವಾರ ಉದ್ಘಾಟಿಸಿ ಮಾತನಾಡಿದ 

ಅವರು, ದೇಶದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಅವಕಾಶಗಳನ್ನು ಕಲ್ಪಿಸಿಕೊಟ್ಟವರು ಡಾ. ಅಂಬೇಡ್ಕರ್‌ರವರು. ಅವರು ತೋರಿದ ಹಾದಿಯಲ್ಲಿ ನಾವೆಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸಬೇಕಿದೆ ಎಂದರು.

ಕ್ಷೇತ್ರದ ಜನರು ಬಹಳ ನಿರೀಕ್ಷೆಯನ್ನು ಇಟ್ಟುಕೊಂಡು ನನಗೆ ಈ ಬಾರಿ ಆಶೀರ್ವಾದ ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಕಟ್ಟಾಯ ಹೋಬಳಿ ವ್ಯಾಪ್ತಿಯಲ್ಲಿ ಹೇಮಾವತಿ ಮುಳುಗಡೆ ಸಂತ್ರಸ್ತರಿಗೆ ( ಎಚ್. ಆರ್. ಪಿ) ಯಲ್ಲಿ ಕಳೆದ 15-20 ವರ್ಷಗಳಿಂದ ಭೂಮಿ ಕಳೆದುಕೊಂಡವರಿಗೆ ಸರಿಯಾದ ಪರಿಹಾರ ದೊರಕದೆ ಇರುವುದು ನನ್ನ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನೆಡೆಸುತ್ತೇನೆ ಎಂದು ಭರವಸೆ ನೀಡಿದರು.

ಇದೆ ವೇಳೆ ಸತ್ತಿಗರಹಳ್ಳಿ ಕೊಪ್ಪಲಿಗೆ ಭೇಟಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿದರು. ಇಲ್ಲಿನ ಸಮುದಾಯ ಭವನಕ್ಕೆ ಕಳೆದ 10 ವರ್ಷದಿಂದ ವಿದ್ಯುತ್ ಸಂಪರ್ಕ ಇಲ್ಲದೆ ಇರುವುದನ್ನು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.

ಈ ಸಂಧರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ಮುಖಂಡರಾದ ಶ್ರೀನಿವಾಸ, ಶೇಖರ್ ದಯಾನಂದ,  ಜನಾರ್ದನ,ವಿಶ್ವನಾಥ್ ಯೋಗೇಶ್ ಸಿಮೆಂಟ್, ಶ್ರೀಕಾಂತ್  ಅಮೃತ್, ಹರೀಶ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular