ವರಿಷ್ಠರ ತೀರ್ಮಾನಕ್ಕೆ ಬದ್ದ : ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್ ಸಂಘಿ
ಸಕಲೇಶಪುರ : ಲೋಕಸಭೆ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಹಾಸನ ಕ್ಷೇತದ ಬಿಜೆಪಿ ಮತದಾರರು ಗೊಂದಲಕ್ಕಿಡಾಗಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಇದುವರೆಗೂ ಅಧಿಕೃತವಾಗಿ ಮೈತ್ರಿ ಪಕ್ಷದಿಂದ ಅಭ್ಯರ್ಥಿ ಯಾರೆಂದು ಘೋಷಣೆಯಾಗಿಲ್ಲ. ಇದರ ನಡುವೆ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣನವರೇ ಮೈತ್ರಿ ಪಕ್ಷದ ಅಭ್ಯರ್ಥಿಯಂದು ಜೆಡಿಎಸ್ ಕಾರ್ಯಕರ್ತರು ಈಗಾಗಲೇ ಪ್ರಚಾರ ಕಾರ್ಯ ಪ್ರಾರಂಭ ಮಾಡಿದ್ದಾರೆ.
ಈ ಕುರಿತಂತೆ ಸಕಲೇಶಪುರ ತಾಲೂಕು ಬಿಜೆಪಿ ಅಧ್ಯಕ್ಷ ಮಂಜುನಾಥ್ ಸಂಘಿ ವಾಸ್ತವ ನ್ಯೂಸ್ ನೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ. ಆದರೆ ನಮ್ಮ ರಾಜ್ಯ ಮಟ್ಟದ ನಾಯಕರು ಈ ಕ್ಷಣದವರೆಗೂ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುಲು ಯಾವುದೇ ಸೂಚನೆ ನೀಡಿಲ್ಲ. ನಮ್ಮ ರಾಜ್ಯದ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ ಗೌಡ, ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಹಾಗೂ ಶಾಸಕ ಸಿಮೆಂಟ್ ಮಂಜು ರವರು ನೀಡುವ ಸೂಚನೆಯಂತೆ ಮುಂದುವರಿಯಲಿದ್ದೇವೆ ಇದರಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಕಾರ್ಯಕರ್ತರು ಸಿದ್ದಾಂತಕ್ಕೆ ಬದ್ಧರಾದವರು ಪಕ್ಷ ನೀಡುವ ಸೂಚನೆ ಹಾಗೂ ಜವಾಬ್ದಾರಿಯನ್ನು ನಾವುಗಳು ಸಮರ್ಥವಾಗಿ, ಪ್ರಾಮಾಣಿಕವಾಗಿ ನಿರ್ವಹಿಸಲಿದ್ದೇವೆ. ಆದ್ದರಿಂದ ಯಾರು ಗೊಂದಲಕ್ಕೆ ಒಳಗಾಗಬಾರದು ಬಿಜೆಪಿ ಕಾರ್ಯಕರ್ತರ ಪಕ್ಷ ಹಾಗಾಗಿ ಪಕ್ಷದ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.