ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ತಿಕ್ಕಲು ಯತ್ನ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಆತಂಕ ಎದುರಾಗಿದ್ದು ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹಿಂದೂ ಮುಖಂಡ ರಘುಜೀ ಹಾಗೂ ಶಿವು ಜಿಪ್ಪಿರವರುಗಳನ್ನು ಚುನಾವಣೆ ಸಂ‘ರ್‘ದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಾರೆಂಬ ನೆಪವೊಡ್ಡಿ ಕಾಂಗ್ರೆಸ್ ಸರ್ಕಾರ ಅವರ ಗಡಿಪಾರಿಗೆ ಆದೇಶಿಸಿದೆ. ಕೇವಲ ಹಿಂದೂ ಮುಖಂಡರನ್ನೇ ಸರ್ಕಾರ ಟಾರ್ಗೆಟ್ ಏಕೆ ಮಾಡುತ್ತಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿರುವುದು ಯಾರು ಎಂಬುದು ಇಡಿ ರಾಜ್ಯದ ಜನತೆಗೆ ಗೊತ್ತು. ಮುಂಬರುವ ಚುನಾವಣೆಯಲ್ಲಿ ಸರ್ಕಾರಕ್ಕೆ ಸೋಲುವ ಭೀತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಹಿಂದೂ ಮುಖಂಡರನ್ನು ಗಡಿಪಾರು ಮಾಡಲು ಮುಂದಾಗಿದೆ. ಮುಂಬರುವ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.