Sunday, November 24, 2024
Homeಸುದ್ದಿಗಳುಸಕಲೇಶಪುರನಾಳೆ ಸಕಲೇಶಪುರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಯಿಂದ ರೋಡ್ ಶೋ

ನಾಳೆ ಸಕಲೇಶಪುರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಯಿಂದ ರೋಡ್ ಶೋ

ನಾಳೆ ಸಕಲೇಶಪುರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಯಿಂದ ರೋಡ್ ಶೋ

ಸಕಲೇಶಪುರ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 19 ಶುಕ್ರವಾರ ಮದ್ಯಾಹ್ನ 1.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರಿಂದ ಪಟ್ಟಣದಲ್ಲಿ ರೋಡ್ ಶೋ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಬೈರಮುಡಿ ಚಂದ್ರು ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಚುನಾವಣಾ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಟ್ಟಣಕ್ಕೆ ಆಗಮಿಸಿ ಬೃಹತ್ ರೋಡ್ ಷೋನಲ್ಲಿ ಭಾಗಿಯಾಗಿ ನಂತರ ಎಪಿಎಂಸಿ ಯಾರ್ಡ್ ಆವರಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದರು.
ಕೆಪಿಸಿಸಿ ಸದಸ್ಯ ಕೊಲ್ಲಹಳ್ಳಿ ಸಲೀಂ ಮಾತನಾಡಿ ಜೆಡಿಎಸ್ ಪಕ್ಷದವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಗೆಲುವು ಸಾಧಿಸಿದ ನಂತರ ಅವರು ಕಾಂಗ್ರೆಸ್ ಪಕ್ಷದವರಿಗೆ ಕನಿಷ್ಠ ಒಂದು ವಂದನೆಯನ್ನು ಸಲ್ಲಿಸಲಿಲ್ಲ. ಈ ಹಿನ್ನಲೆಯಲ್ಲಿ ಬಿಜೆಪಿಯವರು ಅವರಿಗೆ ಬೆಂಬಲ ಕೊಡುವ ಮೊದಲು ಯೋಚಿಸಬೇಕು. ಸಂಸದರಾಗಿ ಪ್ರಜ್ವಲ್ ರೇವಣ್ಣ ವಿಲರಾಗಿದ್ದು ಜಿಲ್ಲೆಯಲ್ಲಿ ಯಾವುದೆ ಅಭಿವೃದ್ದಿ ಕಾರ್ಯಗಳು ಆಗಿಲ್ಲ.ಜನಸಾಮಾನ್ಯರು ಸಂಸದರ ಬಳಿ ಹೋಗಲು ಅಸಾಧ್ಯವಾಗಿದೆ. ಹಾಸನದಿಂದ ಮಾರನಹಳ್ಳಿವರೆಗಿನ ಚತುಷ್ಪಥ ಕಾಮಗಾರಿ ರಸ್ತೆ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು ಇತರ ಹೆದ್ದಾರಿಗಳು ಹೆಚ್ಚಿನ ಗುಣಮಟ್ಟದಲ್ಲಿದೆ. ಈ ಹಿನ್ನಲೆಯೆಲ್ಲಿ ಜೆಡಿಎಸ್ ಪರ ಮತದಾನ ಮಾಡುವವರು ಯೋಚನೆ ಮಾಡಬೇಕೆಂದು ಹೇಳಿದರು.
ಕಾಂಗ್ರೆಸ್ ಯುವ ಮುಖಂಡ ಬಾಚಿಹಳ್ಳಿ ಪ್ರತಾಪ್ ಗೌಡ ಮಾತನಾಡಿ ತಾಲೂಕಿನಲ್ಲಿ ಕಾಂಗ್ರೆಸ್‌ಗೆ ಉತ್ತಮ ಜನಸ್ಪಂದನೆ ದೊರಕುತ್ತಿದೆ. ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಬಹಳ ಅನುಕೂಲವಾಗಿದೆ. ನನಗೆ ಹೆತ್ತೂರು ಹಾಗೂ ಯಸಳೂರು ಹೋಬಳಿಯ ಉಸ್ತುವಾರಿ ನೀಡಿದ್ದು ಈ ಎರಡು ಹೋಬಳಿಗಳಲ್ಲಿ ದಿನನಿತ್ಯ 50ಜನ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ ಕೇಂದ್ರ ಸರ್ಕಾರದ ಯಾವುದೆ ಯೋಜನೆಗಳು ಬಡವರಿಗೆ ಅನುಕೂಲವಾಗಿಲ್ಲ. ಕಾಂಗ್ರೆಸ್‌ನ ಯೋಜನೆಗಳು ಬಡವರಿಗೆ ಬಹಳ ಅನುಕೂಲವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೆಂಗಸರ ಬಗ್ಗೆ ಮಾತನಾಡಿದ್ದು ಸರಿಯಲ್ಲ. ಈ ರೀತಿಯಾಗಿ ಯಾವುದೆ ಮುಖಂಡರು ಮಾತನಾಡಬಾರದು. ಜಿಲ್ಲೆಯಲ್ಲಿ ಜನ ಬದಲಾವಣೆ ಬಯಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಈ ಬಾರಿ ಖಚಿತ ಎಂದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಬ್ಯಾಕರವಳ್ಳಿ ವಿಜಯ್ ಕುಮಾರ್, ಕಲ್ಗಣೆ ಪ್ರಶಾಂತ್, ಬೈಕೆರೆ ದೇವರಾಜ್, ಮತ್ತಿತರರು ಹಾಜರಿದ್ದರು.

RELATED ARTICLES
- Advertisment -spot_img

Most Popular