ಕಾರ್ಯಕರ್ತರ ಪಕ್ಷಾಂತರಕ್ಕೆ ಬಿಗ್ ಟ್ವಿಸ್ಟ್:
ಪ್ರತಾಪ್ ಗೌಡ ನೇತೃತ್ವದಲ್ಲಿ 60ಕ್ಕೂ ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ.
ಸಕಲೇಶಪುರ : ಲೋಕಸಭಾ ಅಕಾಡ ದಿನದಿಂದ ದಿನಕ್ಕೆ ರಂಗೆರುತ್ತಿದ್ದು ಗ್ರಾಮೀಣ ಪ್ರದೇಶದಲ್ಲಿ ಕಾರ್ಯಕರ್ತರ ಪಕ್ಷಾಂತರ ಪರ್ವ ಮುಂದುವರಿದಿದೆ.
ದಿನದಿಂದ ದಿನಕ್ಕೆ ಜೆಡಿಎಸ್ ಬಿಜೆಪಿಯಿಂದ ಕಾಂಗ್ರೆಸ್ಸಿಗೆ, ಕಾಂಗ್ರೆಸ್ ನಿಂದ ಬಿಜೆಪಿಗೆ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ.
ಆದರೆ ಶುಕ್ರವಾರ ಈ ಪಕ್ಷಾಂತರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಾಂಗ್ರೆಸ್ ಯುವ ಮುಖಂಡ ಬಾಚಿಹಳ್ಳಿ ಪ್ರತಾಪ್ ಗೌಡ ನೇತ್ರತ್ವದಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಹಳ್ಳಿಗಳ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಬೆರಳೆಣಿಕೆಯಷ್ಟು ಕಾರ್ಯಕರ್ತರು ಕಾಂಗ್ರೆಸ್ ಹೋಗಿದ್ದರೆ, ಅದೇ ನೆನ್ನೆ ಸಂಜೆ ಹೊಂಗಡಹಳ್ಳಿ ಗ್ರಾಪಂ ಹಾಗೂ ವಳಲಹಳ್ಳಿ ಗ್ರಾಪಂ ವ್ಯಾಪ್ತಿಯ ಚಿನ್ನಳ್ಳಿ ಗ್ರಾಮದ ಜನರು ಜೆಡಿಎಸ್-ಬಿಜೆಪಿ ಪಕ್ಷದಿಂದ 60 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತಂತೆ ಪ್ರತಾಪ್ ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು ಜನರ ಮನಗೆದಿದ್ದೆ.ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ನಾಯಕರ ಮೇಲೆ ಭರವಸೆಯನಿಟ್ಟು ಮುಂದಿನ ದಿನಗಳಲ್ಲಿ ಅನ್ಯ ಪಕ್ಷದಿಂದ ಮತ್ತಷ್ಟು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.