ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾದ ಕಿರ್ಕಳ್ಳಿ ಗ್ರಾಮಸ್ಥರ ಮನ ಓಲೈಸಿದ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್
ಸಕಲೇಶಪುರ: ಮೂಲಭೂತ ಸೌಕರ್ಯಗಳನ್ನು ಗ್ರಾಮಕ್ಕೆ ಕಲ್ಪಿಸಿದಿರುವುದರ ವಿರುದ್ದ ಬೇಸತ್ತು ಮತದಾನ ಬಹಿಷ್ಕಾರಕ್ಕೆ ಮುಂತಾದ ಕಿರ್ಕಳ್ಳಿ ಗ್ರಾಮಸ್ಥರನ್ನು ಉಪವಿಭಾಗಾಧಿಕಾರಿ ಡಾ.ಎಂ.ಕೆ ಶ್ರುತಿ ಹಾಗೂ ತಹಶೀಲ್ದಾರ್ ಮೇಘನಾ ಭೇಟಿ ನೀಡಿ ಮತದಾನ ಬಹಿಷ್ಕಾರ ಹಿಂಪಡೆಯುವಂತೆ ಮನ ಒಲೈಸಿದ್ದಾರೆ.
ತಾಲ್ಲೂಕಿನ ಹೆತ್ತೂರು ಹೋಬಳಿಯ ಕಿರ್ಕಳ್ಳಿ ಗ್ರಾಮವು ಸರ್ಕಾರದ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು ದೂರದ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಎತ್ತಿನಹೊಳೆ ಕಾಮಗಾರಿಯಲ್ಲಿ ಅರ್ಧ ಸೇತುವೆ ಮಾಡಲಾಗಿದೆ ಹಾಗೂ ಐದು ಕಿಲೋ ಮೀಟರ್ ರಸ್ತೆಯ ಕಾಮಗಾರಿಯು ಸಹ ನಡೆದಿಲ್ಲ. ಅಲ್ಲದೆ ಗ್ರಾಮದಲ್ಲಿ ಕಾಡುಪ್ರಾಣಿಗಳ ಕಾಟ ವಿಪರೀತವಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಸಹ ಅರಣ್ಯ ಇಲಾಖೆ ವಿಲವಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದರು ಈ ನಿಟ್ಟಿನಲ್ಲಿ ಉಪವಿಭಾಗಾಧಿಕಾರಿ ಡಾ.ಎಂ.ಕೆ ಶ್ರುತಿ ಗ್ರಾಮಸ್ಥರೊಡನೆ ಮಾತನಾಡಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಮತದಾನ ಹಿಂಪಡೆಯಬೇಕೆಂದು ಮನವಿ ಮಾಡಿದರು.
ಕಿರ್ಕಳ್ಳಿ ಗ್ರಾಮಸ್ಥರ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ರಸ್ತೆ ನಿರ್ಮಾಣಕ್ಕೆ ಎತ್ತಿನಹೊಳೆ ಯೋಜನೆಯಲ್ಲಿ ಅನುದಾನ ಕಾದಿರಿಸಲಾಗಿತ್ತು ಎಂಬ ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನೆಡೆಸುತ್ತೇನೆ. ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಬಗೆ ಹರಿಸಲಾಗುವುದು ಗ್ರಾಮದಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಪವಿಭಾಗಾಧಿಕಾರಿ ಶ್ರುತಿ ಭರವಸೆ ನೀಡಿದರು.