ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ : ತಾಯಿ ಮಗನ ಸಾವು
ಸಕಲೇಶಪುರ : ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಳಾ ಮೂಲದ ಇಬ್ಬರು ಸಾವನಪ್ಪಿದ್ದು ಬಾಕಿ ಉಳಿದಿವರಿಗೆ ಗಂಭೀರ ಗಾಯಗಳಾಗಿರುತ್ತದೆ.
. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಇಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿನಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಲಾ ತಾಲ್ಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಲ ಗ್ರಾಮದ ಮೂಲದ ಶಬೀರ್ ಅಹಮದ್ ಎಂಬುವರ ಪತ್ನಿ ಶಫಿಯ (48) ಹಾಗೂ ಅವರ ಪುತ್ರ ಶಫೀಕ್ ( 21) ಎಂಬುವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಕಾರಿನಲ್ಲಿ ಮಕ್ಕಳು ಸೇರಿ ಇನ್ನು 6 ಮಂದಿ ಇದ್ದು ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ.ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ವೊಂದಕ್ಕೆ ದಾಖಲು ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಸುಧೀರ್ ಎಸ್. ಎಲ್
.