ದಿವಾಕರ್ ಗೆ ಕಾಡಾನೆ ದಾಳಿ ಪ್ರಕರಣ : ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಸ್ಥಳಾಂತರ
ಸಕಲೇಶಪುರ : ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ದಿವಾಕರ್ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಸಕಲೇಶಪುರ ತಾಲೂಕಿನ ವಾಟೆಹಳ್ಳಿಯ ದಿವಾಕರ್ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದು ಹೊಟ್ಟೆ ಹಾಗೂ ತಲೆ ಭಾಗಕ್ಕೆ ತೀವ್ರ ಗಾಯವಾಗಿತ್ತು. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಗಾಯಳುವನ್ನು ತಾಲೂಕು ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಹಿಮ್ಸ್ ಆಸ್ಪತ್ರೆಗೆ ರವಾನಿ ಚಿಕಿತ್ಸೆ ನೀಡಲಾಗಿತ್ತು. ಆದರೆ ದಿವಾಕರ್ ರವರಿಗೆ ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ಮೇರೆಗೆ ಹಿಮ್ಸ್ ಆಸ್ಪತ್ರೆಯಿಂದ ಸೋಮವಾರ ಸಂಜೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹಿಮ್ಸ್ ಚಿಕಿತ್ಸೆ ಪಡೆಯುತ್ತಿದ್ದ ದಿವಾಕರ್ ರವರನ್ನು ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.ಈ ಸಂಧರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಶಿಲ್ಪ, ಉಪವಲಯ ಅರಣ್ಯ ಅಧಿಕಾರಿ ಮಹದೇವ್ ಇದ್ದರು.