ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿತ : ಸಂಚಾರ ಬಂದ್ ಆಗುವ ಸಾಧ್ಯತೆ…?
ಸಕಲೇಶಪುರ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
ತಾಲೂಕಿನ ಗುಲಗಳಲೆ ಗ್ರಾಮದ ರಾಟೆಮನೆ ಸಮೀಪ 40 ಅಡಿ ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ. ಇದರಿಂದ ಒಂದು ಪಥದ ರಸ್ತೆ ಬಂದ್ ಅಗುವ ಸಾಧ್ಯತೆಯಿದೆ ಇಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.