Thursday, November 28, 2024
Homeಸುದ್ದಿಗಳುಸಕಲೇಶಪುರಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಬಿ ಲೋಕೇಶ್ ಅವಿರೋಧ ಆಯ್ಕೆ.

ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಬಿ ಲೋಕೇಶ್ ಅವಿರೋಧ ಆಯ್ಕೆ.

ಬಾಳ್ಳುಪೇಟೆ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಬಿ ಲೋಕೇಶ್ ಅವಿರೋಧ ಆಯ್ಕೆ.

ಉಪಾಧ್ಯಕ್ಷರಾಗಿ ಉಷಾರಾಣಿ ಆಯ್ಕೆ 

ಸಕಲೇಶಪುರ : ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ಬಾಳ್ಳುಪೇಟೆಯಲ್ಲಿರುವ ಬಾಳ್ಳುಪೇಟೆ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಶನಿವಾರ ಶಾಂತಿಯುತವಾಗಿ ನಡೆಯಿತು.

 ಜುಲೈ 06 ರಂದು 11 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.ಶನಿವಾರ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಅಧ್ಯಕ್ಷರು ಹಾಗು ಉಪಾಧ್ಯಕ್ಷರ ಸ್ಥಾನಕ್ಕೆ ಬಿ. ಬಿ ಲೋಕೇಶ್ ಹಾಗೂ ಉಷಾರಾಣಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಜಿಲ್ಲಾ ಸಹಕಾರ ಸಂಘಗಳ ನಿಬಂಧಕರಾದ ಕುಮಾರ್ ಕಾರ್ಯ ನಿರ್ವಹಿಸಿದರು.ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಬಿ. ಬಿ ಲೋಕೇಶ್, ಹಲವಾರು ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾನೆ.ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೆರೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜಿಲ್ಲಾ ಸಂಘದ ಮಾರ್ಗದರ್ಶನ ಹಾಗೂ ನಿರ್ದೇಶಕರ ಸಹಕಾರದಿಂದ ಕೆಲಸ ಮಾಡುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಸಹಕಾರ ಸಂಘದ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್,ನಿರ್ದೇಶಕರಾದ ನೇತ್ರಾವತಿ ಮಂಜುನಾಥ್, ಸಂಗಪ್ಪ ಹೆಗ್ಗೋವೆ ಪುಟ್ಟರಾಜು, ಉದಯ ಶಂಕರ್ ಮುಖಂಡರಾದ ನಿಂಗರಾಜ್, ಲಿಂಗರಾಜು ನಟರಾಜ್, ಬಿ. ಪಿ ಚಂದ್ರಶೇಖರ್,ಬಿ. ಎನ್ ನಾಗೇಶ್, ಬಸವಣ್ಣ,ಕಾಂತರಾಜ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular