ಚಂಗಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರ ಕಮಾಲ್ : ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ.
ಸಕಲೇಶಪುರ : ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ಯಸಳೂರು ಹೋಬಳಿ ಚಂಗಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎಂಟು ಜನ ಸದಸ್ಯ ಬಲದ ಗ್ರಾಪಂಯಲ್ಲಿ ಬಿಜೆಪಿಯ 4,ಜೆಡಿಎಸ್ 2 ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರಿದ್ದರು. ಗುರುವಾರ ನೆಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪಾರ್ವತಿ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನ ಗೆಲ್ಲಬೇಕೆಂದು ಜಿದ್ದಿಗೆ ಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದೆ. ಅಧ್ಯಕ್ಷ ಸ್ಥಾನ ಗೆಲ್ಲಲು ಕಾಂಗ್ರೆಸ್ ರಣತಂತ್ರವನ್ನು ಹರಿತ ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಪ್ರತಿತಂತ್ರ ರೂಪಿಸಿ ಎದುರು ಪಕ್ಷದ ಒಬ್ಬ ಸದಸ್ಯರನ್ನು ಸೆಳೆಯುವ ಮೂಲಕ ಚಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ. ಒಟ್ಟಾರೆಯಾಗಿ ಚುನಾವಣೆ ಶಾಂತಿಯುತವಾಗಿ ಜರುಗಿದ್ದು ಚುನಾವಣಾ ಅಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್ ನಿರ್ವಹಿಸಿದರು.ಈ ವೇಳೆ ಮಾತನಾಡಿದ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್,ಶಾಸಕ ಸಿಮೆಂಟ್ ಮಂಜುರವರ ಜನಪರ ಕೆಲಸಗಳಿಂದ ಬಿಜೆಪಿಗೆ ಉತ್ತಮ ಬೆಂಬಲ ದೊರಕುತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮ ಪಂಚಾಯಿತಿಗಳ ಅಧಿಕಾರ ಹಿಡಿಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಪ್ರತಾಪ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್, ಬಿಜೆಪಿ ಮುಖಂಡರಾದ
ಸವಿನ,ಧರಣಿ, ಯೋಗೇಶ್ ಯುವ ಮುಖಂಡ ಇಂದನ್ ಅರೆಕೆರೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ತಾಲೂಕು ಬಿಜೆಪಿ ಅಧ್ಯಕ್ಷರ ಕಮಾಲ್ :
ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಪಕ್ಷವನ್ನು ಪ್ರಗತಿ ಪಥದತ್ತ ಕೊಂಡೊಯ್ಯುತ್ತಿದ್ದು ಅಧ್ಯಕ್ಷರಾದ ಪ್ರಥಮದಲ್ಲೇ ಇಡೀ ತಾಲೂಕಿನ ಇತರ ಪಕ್ಷಗಳು ಮುಖಭಂಗ ಅನುಭವಿಸವಂತೆ ಮಾಡಿದ್ದಾರೆ. TAPMS ಅಧ್ಯಕ್ಷರಾಗಿ ಆಯ್ಕೆಯಾದ ಕಿರುವಾಲೆ ಶಶಿಕುಮಾರ್, ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್, ಯಸಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸನ್ನ, ಇವರುಗಳ ಆಯ್ಕೆಯ ಹಿಂದೆ ಅಶ್ವಥ್ ರವರ ರಣತಂತ್ರ ಅಡಗಿದೆ ಎಂಬುವುದು ಸತ್ಯ.