Tuesday, December 3, 2024
Homeಸುದ್ದಿಗಳುಶಾಸಕರ ನೂತನ ಕಚೇರಿ ಉದ್ಘಾಟನೆ: ಅಭಿವೃದ್ಧಿಯೇ ನನ್ನ ಮೂಲ ಮಂತ್ರ - ಶಾಸಕ ಸಿಮೆಂಟ್ ಮಂಜು

ಶಾಸಕರ ನೂತನ ಕಚೇರಿ ಉದ್ಘಾಟನೆ: ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಶಾಸಕ ಸಿಮೆಂಟ್ ಮಂಜು

ಶಾಸಕರ ನೂತನ ಕಚೇರಿ ಉದ್ಘಾಟನೆ: ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಶಾಸಕ ಸಿಮೆಂಟ್ ಮಂಜು

ಹಾಸನ : ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ನಗರದ ತಾಲೂಕು ಪಂಚಾಯತಿ ಸಮುಚ್ಚಯದ ಕೊಠಡಿಯಲ್ಲಿ ಸೋಮವಾರ ನೂತನ ಕಚೇರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಮಂಜು ,ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ  ಕಟ್ಟಾಯ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಕಚೇರಿ ತೆರೆಯಲಾಗಿದೆ.ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ವಿಧಾನಸಭಾ ಕ್ಷೇತ್ರದ ಶಾಸಕರ ಅಧಿಕೃತ ಕಛೇರಿಯನ್ನು ಪ್ರಾರಂಭಿಸಲಾಗಿದೆ. ಕಟ್ಟಾಯ ಭಾಗದ ಜನರ ಸಮ್ಮುಖದಲ್ಲಿ ದೀಪ ಬೆಳಗಿಸಿ ಶಾಸಕರ ಕಛೇರಿಗೆ ಚಾಲನೆ ನೀಡಲಾಗಿದೆ.ಈ ಕಚೇರಿ  ಜನರ, ದುರ್ಬಲರ, ಸಾರ್ವಜನಿಕರ, ಜನ ಸಾಮಾನ್ಯರ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.. ನಾನು ಮತ್ತು ಸಿಬ್ಬಂದಿಗಳು ಒಟ್ಟಾಗಿ ಜನ ಸಾಮಾನ್ಯರ ಸೇವೆ ಮಾಡಲು ದುಡಿಯುವ ಮೂಲಕ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲು ಬದ್ಧತೆಯಿಂದ ಪ್ರಯತ್ನಿಸುತ್ತೇವೆ.  ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶಾಸಕರ ಕಛೇರಿ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

RELATED ARTICLES
- Advertisment -spot_img

Most Popular