ಹಾಸನ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸದಸ್ಯತ್ವ ಅಭಿಯಾನದ ಸಭೆ.
ಸಕಲೇಶಪುರ : ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಸಭೆ ಏರ್ಪಡಿಸಲಾಗಿತ್ತು.
ನಗರದ ಬಿಜೆಪಿ ಕಚೇರಿಯಲ್ಲಿ ನೆಡೆದ ಸಭೆಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಸದಸ್ಯರಾದ ಸರೋಜಾ ಸುರೇಂದ್ರ ರವರು ಪದಾಧಿಕಾರಿಗಳು, ಕಾರ್ಯಕರ್ತರನ್ನು ಸಭೆ ಉದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮಿತ್ ಶೆಟ್ಟಿ,ಗಿರೀಶ್,ಪ್ರಧಾನ ಕಾರ್ಯದರ್ಶಿಗಳಾದ ಅಂಬಿಕಾ ಹಾಗೂ ಇಂದಿರಾ ಸೇರಿದಂತೆ ಹಾಸನ ನಗರದ ಮಹಿಳಾ ಮೋರ್ಚಾ ಎಲ್ಲಾ ಸದಸ್ಯರು ಮತ್ತು ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಗೂ ಕಾರ್ಯಕಾರಣಿ ಸದಸ್ಯರು ಉಪಸ್ಥಿತರಿದ್ದರು


                                    
