ಎತ್ತಿನಹೊಳೆ ಯೋಜನೆ ವತಿಯಿಂದ ಬೆಳೆ ಪರಿಹಾರ ದೊರಕಿಸಿ ಕೊಡಲು ಯಶಸ್ವಿಯಾದ ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ಮಲೆನಾಡು ಭಾಗದಿಂದ ಬಯಲು ಸೀಮೆಗೆ ಕುಡಿಯುವ ನೀರಿನ ಯೋಜನೆಯಾದ ಎತ್ತಿನ ಹೊಳೆ ಸಮಗ್ರ ಕುಡಿಯುವ ಯೋಜನೆ ಕಾಮಗಾರಿಗಾಗಿ ಭೂಮಿ ಕಳೆದುಕೊಂಡಿದ್ದ ರೈತರಿಗೆ ಯೋಜನೆ ವತಿಯಿಂದ ಬೆಳೆ ಪರಿಹಾರ ಕೊಡಿಸುವಲ್ಲಿ ಶಾಸಕ ಸಿಮೆಂಟ್ ಮಂಜು ಯಶಸ್ವಿಯಾಗಿದ್ದಾರೆ.
ಶನಿವಾರ ತಾಲೂಕು ಪಂಚಾಯತಿ ಆವರಣದಲ್ಲಿ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಣೆ ಮಾಡಿ ಮಾತನಾಡಿದರು, ಎತ್ತಿನಹೊಳೆ ಯೋಜನೆಗಾಗಿ ತಾಲೂಕಿನ ಹಲವಾರು ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರು ತಮ್ಮ ಕೃಷಿ ಭೂಮಿ, ಮನೆಗಳನ್ನು ಕಳೆದುಕೊಂಡಿದ್ದಾರೆ.ಕೆಲವರಿಗೆ ಸರ್ಕಾರಿ ದಾಖಲೆ ಹೊಂದಿಸಲು ವಿಫಲರಾಗಿ ಪರಿಹಾರದಿಂದ ವಂಚಿತ ರಾಗಿದ್ದರು.ಕಳೆದ ಐದಾರು ವರ್ಷಗಳಿಂದ ಪರಿಹಾರಕ್ಕಾಗಿ ಪರಿತಪ್ಪಿಸುತ್ತಿದ್ದ ಕುಟುಂಬಗಳು ಮನವಿ ಮಾಡಿದ್ದರಿಂದ ವಿಧಾನಸಭಾ ಅಧಿವೇಶನದಲ್ಲಿ ಪರಿಹಾರದ ವಿಚಾರವಾಗಿ ಸರ್ಕಾರದ ಗಮನ ಸೆಳೆದಿದ್ದೇನೆ.ಇದರ ಫಲವಾಗಿ ಹೆಗ್ಗದ್ದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಟ್ಟು ಆರು ರೈತ ಕುಟುಂಬಗಳಿಗೆ ರೂ.22.30 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದೇನೆ. ಇದರ ಜೊತೆಗೆ ಕ್ಷೇತ್ರದ ಮೂಲಭೂತ ಸೌಕರ್ಯಕ್ಕಾಗಿ ಅನುದಾನ ಒದಗಿಸುವಂತೆ ಈಗಾಗಲೇ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ವಿಧಾನಸಭಾ ಅಧಿವೇಶನ, ಎತ್ತಿನ ಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪ್ರಾರಂಭದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೂ ಸೇರಿದಂತೆ ಸಂಪನ್ಮೂಲ ಖಾತೆ ಸಚಿವ ಡಿ.ಕೆ ಶಿವಕುಮಾರ್ ರವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ.ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮದ ಕಾರ್ಯಪಾಲಕ ಅಭಿಯಂತರ ಡಿ. ಎಚ್ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರ್ ಮಹಮ್ಮದ್ ಇಕ್ಬಾಲ್, ವಿವೇಕ್ ಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.