Thursday, November 21, 2024
Homeಸುದ್ದಿಗಳುಸಕಲೇಶಪುರಪಟ್ಟಣದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಶಾಸಕ ಸಿಮೆಂಟ್ ಮಂಜು

ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ ಪಟ್ಟಣದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅಧ್ಯತೆ ಶಾಸಕ ಸಿಮೆಂಟ್ ಮಂಜು 

ಸಕಲೇಶಪುರ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

  ಪಟ್ಟಣದ ಪುರಸಭಾ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿ ಪುರಸಭೆಯ ಆವರಣ ಸಂಪೂರ್ಣ ಹದಗೆಟ್ಟಿದ್ದು ಈ ಹಿನ್ನೆಲೆಯಲ್ಲಿ ಇಲ್ಲಿನ ಆವರಣವನ್ನು ದುರಸ್ಥಿ ಪಡಿಸಬೇಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ತಾ.ಪಂಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಈ ನಿಟ್ಟಿನಲ್ಲಿ ಇಲ್ಲಿ ರಸ್ತೆ ಕಾಮಗಾರಿ ಮಾಡಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 25ಲಕ್ಷ ರೂ ವೆಚ್ಚದಲ್ಲಿ ಪುರಸಭೆಯ ಆವರಣದ ದುರಸ್ಥಿ ಹಾಗೂ ಉಪವಿಭಾಗಾಧಿಕಾರಿ ಕಚೇರಿುಂದ ತಾ.ಪಂಗೆ ಹೋಗುವ ರಸ್ತೆಯನ್ನು ಅಭಿವೃದ್ದಿಪಡಿಸುವ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಸರ್ಕಾರದಿಂದ ಬರುತ್ತಿರುವ ಅನುದಾನ ಅತ್ಯಂತ ಕಡಿಮೆ ಇರುವುದರಿಂದ ಹಂತ ಹಂತವಾಗಿ ಪಟ್ಟಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು. 

ಈ ಸಂರ್ಧಭದಲ್ಲಿ ಪುರಸಭಾ ಅಧ್ಯಕ್ಷೆ ಜ್ಯೋತಿ ರಾಜ್‌ಕುಮಾರ್, ಉಪಾಧ್ಯಕ್ಷೆ ಜರೀನಾ, ಪುರಸಭಾ ಮುಖ್ಯಾಧಿಕಾರಿ ನಟರಾಜ್, ಪುರಸಭಾ ಸದಸ್ಯೆ ವನಜಾಕ್ಷಿ, ಪುರಸಭಾ ಆರೋಗ್ಯ ನಿರೀಕ್ಷಕ ದಾನವೇಂದ್ರ, ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -spot_img

Most Popular