ಸಾವಿತ್ರಿಬಾಯಿ ಪುಲೆ ಬದುಕು ಆದರ್ಶನೀಯ-ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ಸಮಾನ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಪುಲೆ ಅವರ ಬದುಕು ಹೋರಾಟದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಳಿಗೆ ಆದರ್ಶನೀಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾವಿತ್ರಿಬಾಯಿ ಪುಲೆ ಜನ್ಮ ದಿನದ ಅಂಗವಾಗಿ ಸಾವಿತ್ರಿಬಾಯಿ ಪುಲೆ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಮಾತನಾಡಿದರು.
ಸಮಾಜದಲ್ಲಿ ಸಮಾನ ಶಿಕ್ಷಣ ನೀಡಲು ಸತ್ಯ, ನ್ಯಾಯಯುತವಾಗಿ ಹೋರಾಡಿದ ಸಾವಿತ್ರಿ ಬಾಯಿ ಪುಲೆ ಅವರು ನೋವನ್ನು ನುಂಗಿ ಸಮಾಜ ಆರೋಗ್ಯಪೂರ್ಣವಾಗಿರಲು ಶಿಕ್ಷಣ ಅತ್ಯವಶ್ಯಕವೆಂದು ಪ್ರತಿಪಾದಿಸಿದವರು. ಪುಲೆ ಅವರ ಆಶಯದಂತೆ ತಳ ಸಮುದಾಯ, ಗ್ರಾಮಗಳಲ್ಲಿ, ಕೆಳಹಂತದ ಜನರಲ್ಲಿ ಶಿಕ್ಷಣದ ಸಂಘಟನೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗದ ಜನರಿಗೆ, ಹೆಣ್ಣು ಮಕ್ಕಳಿಗೆ ಮೂಲಭೂತ ಶಿಕ್ಷಣ ನೀಡುವಲ್ಲಿ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು,” ಎಂದು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗಂಗಾಧರನ್, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಹರೀಶ್, ಬಿಜೆಪಿ ಮುಖಂಡರಾದ ರಾಜ್ ಕುಮಾರ್, ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಓ,ಕಾರ್ಯದರ್ಶಿಗಳು ಹಾಗೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.