ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ವಿದ್ಯುತ್ ಕಂಬ ಬಿದ್ದು ಮಹಿಳೆಗೆ ಗಂಭೀರ ಗಾಯ.
ಸಕಲೇಶಪುರ : ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದು ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗಾಳಿಗುಡ್ಡದಲ್ಲಿ ನಡೆದಿದೆ.
ಗ್ರಾಮದಲ್ಲಿ ಅನೇಕ ದಿನಗಳಿಂದ ಶಿಥಿಲ ವ್ಯವಸ್ಥೆಯಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಹಲವು ಬಾರಿ ಚೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮನವಿ ಮಾಡಿದ್ದರು ಸಹ ಕ್ಯಾರೇ ಎನ್ನದ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ಗ್ರಾಮದ ಶಾರದಾ (45) ಎಂಬುವವರು ಗಂಭೀರವಾಗಿ ಗಾಯಗೊಂಡು ಸಕಲೇಶಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ ಮಹಿಳೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರ ಮನವಿಗೆ ನಿರ್ಲಕ್ಷ ತೋರಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿಷಯ ತಿಳಿಸಿದಂತೆ ಶಾಸಕರು ಜೆಸ್ಕಾಂ ನ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಗಾಯಗೊಂಡಿರುವ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡಿ. ಸಮಗ್ರ ತನಿಖೆ ನೆಡೆಸಿ ತಪ್ಪಿಸಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.