ಹೆಬ್ಬನಹಳ್ಳಿ ಗ್ರಾಮದ ಬಳಿ ವ್ಯಕ್ತಿಯ ಮೇಲೆ ಒಂಟಿ ಸಲಗ ದಾಳಿ : ಸ್ಥಿತಿ ಗಂಭೀರ
ಸಕಲೇಶಪುರ ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಒಂಟಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ರಾಜು(68) ಗಾಯಗೊಂಡವರಾಗಿದ್ದಾರೆ.ಕೂಡಲೆ ಸ್ಥಳೀಯರ ನೆರವಿನಿಂದ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ