ಆಪರೇಷನ್ ಸಿಂಧೂರ’ ಯಶಸ್ವಿ: ಸಕಲೇಶಪುರದಲ್ಲಿ ವಿಶೇಷ ಪೂಜೆ
ಸಕಲೇಶಪುರ:ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ನಗರದ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಯೋಧರಿಗೆ ಒಳಿತಾಗಲಿ ಹಾಗು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಸಂಕಲ್ಪದೊಂದಿಗೆ ಇಂದು ಬೆಳಗ್ಗೆ ವಿಶೇಷ ಪೂಜೆ ನಡೆಯಿತು.ಈ ಸಂಧರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಭಾರತೀಯ ಸೇನೆ ಪಾಕಿಸ್ತಾನದ 9 ಉಗ್ರ ತಾಣ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಸೇನೆಯ ಕಾರ್ಯಕ್ಕೆ ಈಡೀ ದೇಶವೇ ಪ್ರಶಂಸಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೊಟ್ಟ ಮಾತು, ಇಟ್ಟ ಹೆಜ್ಜೆ ತಪ್ಪುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ’ ಎಂದು ಹೇಳಿದರು. ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಪ್ರತಿಯಾಗಿ ಭಾರತೀಯ ಸೈನಿಕರು ದಾಳಿ ನಡೆಸಿದ್ದಾರೆ. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಪಾಕಿಸ್ತಾನದ ಸ್ಥಿತಿ ಗಂಭೀರವಾಗಿದೆ. ಭಯೋತ್ಪಾದನೆಯ ಸಂಪೂರ್ಣ ನಾಶವೇ ಭಾರತದ ಗುರಿ ಎಂದರು.
ಈ ಸಂಧರ್ಭದಲ್ಲಿನಗರ ಬಿಜೆಪಿ ಘಟಕದ ಅಧ್ಯಕ್ಷ ಲೋಕೇಶ್(ದಿಂಬು) ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್,ಜಿಲ್ಲಾ ಬಿಜೆಪಿ ಮುಖಂಡ ಕ್ಯಾಮನಹಳ್ಳಿ ರಾಜ್ ಕುಮಾರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.