ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ನಿರ್ದೇಶಕರಾಗಿ ಬಿಜೆಪಿಯ ನಿಖಿಲ್ ಹಲಸುಲಿಗೆ ಗೆಲುವು
ಸಕಲೇಶಪುರ: ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೆಡೆದ ಚುನಾವಣೆಯಲ್ಲಿ ನಿಖಿಲ್ ಹಲಸುಲಿಗೆ ಗೆಲುವು ಸಾಧಿಸಿದ್ದಾರೆ.
ಸಾಲಗಾರಲ್ಲದ ಸಾಮಾನ್ಯ ಕ್ಷೇತ್ರದಿಂದ ಸ್ಪರ್ದಿಸಿದ್ದ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ನಿಖಿಲ್ ಹಲಸುಲಿಗೆ ವಿಜಯ ಸಾಧಿಸಿದ್ದಾರೆ.ಸಾಲಗಾರಲ್ಲದ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದು ನಿಖಿಲ್ ವರು 183 ಮತಗಳನ್ನ ಪಡೆಯುವ ಮೂಲಕ ಪ್ರತಿಸ್ಪರ್ಧಿಗಿಂತ 85 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ನಿಖಿಲ್ ಅವರ ಗೆಲುವಿಗೆ ಶಾಸಕ ಸಿಮೆಂಟ್ ಮಂಜು, ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಪದಾಧಿಕಾರಿಗಳು ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.