ಶಿರಾಡಿ ಘಾಟ್ ನಲ್ಲಿ ಅಪಘಾತ : ವಾಹನ ಸಂಚಾರದಲ್ಲಿ ವ್ಯತ್ಯಾಯ.
ಬದಲಿ ಮಾರ್ಗದಲ್ಲಿ ವಾಹನ ಸವಾರರು ತೆರಳಲು ಸಲಹೆ
ಸಕಲೇಶಪುರ : ಬೆಂಗಳೂರು – ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿರುವ ಘಟನೆ ನೆಡೆದಿದೆ.
ಘಾಟಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತವಾಗಿದ್ದು ಮತ್ತೊಂದು ಕಡೆ ಲಾರಿ ರಸ್ತೆ ಮಧ್ಯದಲ್ಲಿ ಕೆಟ್ಟು ನಿಂತಿರುವ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿದೆ.ಲಘು ವಾಹನಗಳು ಮಾತ್ರ ಸಂಚರಿಸಲು ಅವಕಾಶವಿದ್ದು ಭಾರಿ ಗಾತ್ರದ ವಾಹನ. ಸಂಚಾರ ಸಾಧ್ಯವಿಲ್ಲದ ಹಿನ್ನಲೆ ವಾಹನಗಳು ಬದಲಿ ಮಾರ್ಗದಲ್ಲಿ ಚಲಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೋಲೀಸರು ಭೇಟಿ ನೀಡಿ ರಸ್ತೆ ಮಧ್ಯದಲ್ಲಿ ಕೆಟ್ಟು ನಿಂತಿರುವ ಲಾರಿಯನ್ನು ರಸ್ತೆಯ ಪಕ್ಕಕ್ಕೆ ಸರಿಸಲು ಪ್ರಯತ್ನಿಸುತ್ತಿದ್ದಾರೆ.