ಸಕಲೇಶಪುರ : ಅಚೀವರ್ಸ್ ಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಕಲೇಶಪುರ : ಹಾಸನ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಚೀವರ್ಸ್ ಪ್ರಜ್ಞಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ವಿಭಾಗಗಳಲ್ಲಿ ಮೆಚ್ಚುಗೆಯ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ನವ್ಯಶ್ರೀ ಏಕಪಾತ್ರಾಭಿನಯ ವಿಭಾಗದಲ್ಲಿ ಪ್ರಥಮ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಶುಭಾ ಬಿ.ಹೆಚ್ ಆಂಗ್ಲ ಭಾಷಾ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಫಾತಿಮತ್ ಶಮ್ನಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಜನಪದ ನೃತ್ಯ ಸ್ಪರ್ಧೆಯಲ್ಲಿ ಹೂರಿಯಾ ತಸ್ಕೀನ್ ದ್ವಿತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಸಾನಿಯಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.



