ಆಲೂರು ರಾಮಮಂದಿರ ನಿರ್ಮಾಣಕ್ಕೆ ಧರ್ಮಸ್ಥಳ ಸಂಸ್ಥೆಯಿಂದ 1.50ಲಕ್ಷ ಆರ್ಥಿಕ ಕೊಡುಗೆ
ಆಲೂರು :ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಲೂರು ಪಟ್ಟಣದ ಖಾಜಿ ಮೊಹಲ್ಲಾದ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರಕ್ಕೆ 1.50 ಲಕ್ಷ ಆರ್ಥಿಕ ಸಹಾಯ ನೀಡಿದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾದಿಕಾರಿ ಪುರುಷೋತ್ತಮ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ಧಾರ್ಮಿಕ ಕೇಂದ್ರವಾಗಿರದೇ ಸಮಾಜ ಸುಧಾರಣೆ, ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸು ಹೆಗ್ಗಡೆ ಅವರಿಂದ ನನಸಾಗುತ್ತಿದೆ. ಹಿಂದು ರುದ್ರ ಭೂಮಿ ಆಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿ, ಸಮುದಾಯ ಭವನ ಹಾಲು ಉತ್ಪಾದಕರ ಕಟ್ಟಡ, ನಿರ್ಗತಿಕರ ಮಾಶಾಸನ, ಸುಜ್ಞಾನ ನಿಧಿ, ಗೊಶಾಲೆ, ಸಾರ್ವಜನಿಕ ಶೌಚಾಲಯ, ಶುದ್ಧ ಗಂಗಾ ಕುಡಿಯುವ ನೀರಿನ ಘಟಕ ಮುಂತಾದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿವೃದ್ಧಿ ಪಡಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಶೈವ ಸಂಘದ ತಾಲೂಕು ಅಧ್ಯಕ್ಷ ರೇಣುಕಾಪ್ರಸಾದ್, ಬಿಜೆಪಿ ಹಿರಿಯ ಮುಖಂಡ ಎ. ಎಚ್.ರಮೇಶ್,ಇಂಜಿನಿಯರ್ ಮಧುನಾರಾಯಣ್’, ರಾಮಮಂದಿರ ನಿರ್ಮಾಣ ಸಂಘದ ಅಧ್ಯಕ್ಷ ಉಮೇಶ್,ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಹೇಮಂತ್,ಧರ್ಮರಾಜ್,ದೇವೆಂದ್ರ, ಲೋಹಿತ್, ಹಾಗೂ ಇತರರು ಉಪಸ್ಥಿತರಿದ್ದರು.