Sunday, November 24, 2024
Homeಸುದ್ದಿಗಳುಸಕಲೇಶಪುರರಾಷ್ಟ್ರೀಯ ಹೆದ್ದಾರಿ 75ರ ಅವ್ಯವಸ್ಥೆ ಹಾಗೂ ಕಾಡಾನೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ.

ರಾಷ್ಟ್ರೀಯ ಹೆದ್ದಾರಿ 75ರ ಅವ್ಯವಸ್ಥೆ ಹಾಗೂ ಕಾಡಾನೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ.

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಹಾಗೂ ಕಾಡಾನೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ.

ಸಕಲೇಶಪುರ : ಸಕಲೇಶಪುರ ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಹುದಿನಗಳ ಸಮಸ್ಯೆಯಾದ ರಾಷ್ಟ್ರೀಯ ಹೆದ್ದಾರಿ 75 ರ ಅವ್ಯವಸ್ಥೆ ಮತ್ತು ನಿರಂತರ ವಾಗಿ ಹಾವಳಿ ನೆಡೆಸುತ್ತಿರುವ ಕಾಡಾನೆಗಳ ಕುರಿತಾಗಿ ಜಿಲ್ಲಾಧಿಕಾರಿ ಅರ್ಚನಾ ಹಾಗೂ ಸಂಭಂದಪಟ್ಟ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗುವುದು ಎಂದು ಶಾಸಕ ಎಚ್. ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.

ಕ್ಷೇತ್ರದ ಎಲ್ಲ ಪಕ್ಷಗಳ ಜನ ಪ್ರತಿನಿಧಿಗಳು, ಕಾಡಾನೆ ಹಾವಳಿ ಸಂತ್ರಸ್ತರು ಹೋರಾಟ ಸಮಿತಿ, ಕನ್ನಡಪರ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ಸಮಾಕ್ಷಮದಲ್ಲಿ ಶಾಶ್ವತ ಪರಿಹಾರಕ್ಕಾಗಿ ಎಲ್ಲರ ಅಭಿಪ್ರಾಯವನ್ನು ಆಲಿಸಿ ಸರಕಾರಕ್ಕೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕರು ಹೇಳಿದ್ದಾರೆ.

ದೀಪಾವಳಿ ಹಬ್ಬ ಮುಗಿದ ಕೂಡಲೇ ಸಭೆಯ ದಿನಾಂಕವನ್ನು ಗೊತ್ತು ಮಾಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಸರ್ಕಾರದ ಕಣ್ಣು ತೆರೆಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

RELATED ARTICLES
- Advertisment -spot_img

Most Popular