Friday, April 4, 2025
Homeಸುದ್ದಿಗಳುದೇಶBIGBREAKING Mallikarjun Kharge |ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ

BIGBREAKING Mallikarjun Kharge |ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ

Mallikarjun Kharge |ಕಾಂಗ್ರೆಸ್ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ)  ಅಧ್ಯಕ್ಷರಾಗಿ (Congress President) ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. 22 ವರ್ಷದಲ್ಲಿ ಇದೇ ಮೊದಲ ಬಾರಿ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಕರ್ನಾಟಕದಿಂಗದ ಕಾಂಗ್ರೆಸ್ ಅಧ್ಯಕ್ಷರಾಗುತ್ತಿರುವ ಎರಡನೇ ವ್ಯಕ್ತಿ ಮಲ್ಲಿಕಾರ್ಜುನ ಖರ್ಗೆ ಅವರಾಗಿದ್ದಾರೆ.

ಅಕ್ಟೋಬರ್ 17ರಂದು ನಡೆದ ಎಐಸಿಸಿ ಅಧ್ಯಕ್ಷ ಹುದ್ದೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ತಿರುವನಂತಪುರ ಕ್ಷೇತ್ರ ಸಂಸದ ಶಶಿ ತರೂರ್ ಅವರನ್ನು ಸೋಲಿಸಿದ್ದರು. ಖರ್ಗೆ ಪದಗ್ರಹಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲಾ, ವೇಣುಗೋಪಾಲ್, ದಿಗ್ವಿಜಯ ಸಿಂಗ್, ಬೈರತಿ ಸುರೇಶ್, ಹಿಟ್ನಾಳ,ಡಿ ಕೆ ಶಿವಕುಮಾರ್ ಕೂಡ ಹಾಜರಿದ್ದರು.

RELATED ARTICLES
- Advertisment -spot_img

Most Popular