ಸಕಲೇಶಪುರ : ಕನ್ನಡ ರಾಜ್ಯೋತ್ಸವದ ಸಿದ್ಧತೆ ಕುರಿತು ಅಂತಿಮ ಹಂತದ ಪೂರ್ವಭಾವಿ ಸಭೆ ತಹಸೀಲ್ದಾರ್ ಜೈಕುಮಾರ್ ಮಾಹಿತಿ.
ಸಕಲೇಶಪುರ :- ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ಎಚ್. ಬಿ ಜೈಕುಮಾರ್ ರವರು ನಾಳೆ ಅಂದರೆ 27-10-2022 ಗುರುವಾರ ಮಧ್ಯಾಹ್ನ 3.00 ಗಂಟೆಗೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ.
ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಎಲ್ಲಾ ಮಾಧ್ಯಮಿತ್ರರಿರು ಸಭೆಗೆ ಹಾಜರಾಗಿ ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ಇದ್ದ ಕಾರಣ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿತ್ತು. ಈ ಬಾರಿ ಕೋವಿಡ್ ಕಡಿಮೆಯಾಗಿದ್ದರಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಹಸೀಲ್ದಾರ್ ಜೈಕುಮಾರ್ ನಿರಂತರ ನ್ಯೂಸ್ 24×7 ಗೆ ಮಾಹಿತಿ ಒದಗಿಸದ್ದಾರೆ.