Sunday, November 24, 2024
Homeಸುದ್ದಿಗಳುಸಕಲೇಶಪುರನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಚ್ಚರಡಿ ಮೋಹನ್ ಅಗ್ರಹ.

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಚ್ಚರಡಿ ಮೋಹನ್ ಅಗ್ರಹ.

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಚ್ಚರಡಿ ಮೋಹನ್ ಅಗ್ರಹ.

ಸಕಲೇಶಪುರ :- ಅಕ್ರಮ ಗೋ ಹತ್ಯೆ ತಡೆ ವಿಚಾರದಲ್ಲಿ ನೈತಿಕ ಪೊಲೀಸ್ ಗಿರಿ ನೆಡೆಸುವವರ ಮೇಲೆ ಕ್ರಮ ಜರುಗಿರುವಂತೆ ದಲಿತ ಸಂಘರ್ಷ ಸಮಿತಿಯ ಮುಖಂಡ, ಗ್ರಾಮ ಪಂಚಾಯತಿ ಸದಸ್ಯರಾದ ಅಚ್ಚರಡಿ ಮೋಹನ್ ಅಗ್ರಹಿಸಿದ್ದಾರೆ.

ಅಕ್ರಮ ಗೋ ಹತ್ಯೆ ಹಾಗೂ ಸಾಗಾಟ ತಡೆಯಲು ಪೊಲೀಸ್ ಇಲಾಖೆ ಇದೆ. ಆದರೆ ಇತ್ತೀಚಿಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ತಾವೇ ಪೊಲೀಸ್ ಎಂದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ.

ನೈತಿಕ ಪೊಲೀಸ್ ಗಿರಿಯ ವಿರುದ್ಧ ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಸೂಕ್ತ ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ತಾಲೂಕಿನ ಅಲೆಬೇಲೂರಿನಲ್ಲಿ ಅಕ್ರಮ ಗೋಮಾಂಸ ಕಡಿದು ಮಾರುತ್ತಿದ್ದವರ ಮೇಲೆ ದಾಳಿ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು ನಂತರ ಇಬ್ಬರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಇದರ ಬೆನ್ನೆಲೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಹಾಗೂ ಅಲ್ಲಿ ನಡೆಸಿದ ಕೇಸ್ ದಾಖಲಾಗಿದೆ.

RELATED ARTICLES
- Advertisment -spot_img

Most Popular