ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಆಯ್ಕೆಯಾದ ಹಿನ್ನೆಲೆ.
ಸಕಲೇಶಪುರ :ಅಮೃತ ಗ್ರಾಮ ಪಂಚಾಯತಿಯೋಜನೆಗೆ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತಿ ಆಯ್ಕೆಯಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿಯ ಜನಪ್ರತಿನಿದಿಗಳು ಶಾಸಕ ಎಚ್. ಕೆ ಕುಮಾರಸ್ವಾಮಿ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಚಂಚಲ ಕುಮಾರಸ್ವಾಮಿಯವರನ್ನು ಅಭಿನಂದನೆ ಸಲ್ಲಿಸಿದರು.
ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಬಿರಡಹಳ್ಳಿ ಗ್ರಾಮ ಪಂಚಾಯತಿಯ ಸಮಗ್ರ ಅಭಿವೃದ್ಧಿಗೆ ಸಹಕರಿಸಿದ ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಈ ಯೋಜನೆಯಿಂದ ಬಿರಡಹಳ್ಳಿ ಗ್ರಾಮ ಪಂಚಾಯತಿಗೆ. ಎರಡು ಹಂತದಲ್ಲಿ 12.5ಲಕ್ಷ ಅನುದಾನ ಬಂದಿದೆ. ಈ ಅನುದಾನದಲ್ಲಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳು/ಸೋಲಾರ್ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ, ಶೇ. 100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಗ್ರಾ.ಪಂ. ಕಟ್ಟಡಗಳಲ್ಲಿ ಸೌರ ವಿದ್ಯುತ್ ಅಳವಡಿಕೆ, ಅಮೃತ ಉದ್ಯಾನವನ, ಗ್ರಾ.ಪಂ. ಗ್ರಂಥಾಲಯದ ಡಿಜಿಟಲೀಕರಣ, ಶಾಲೆ/ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಶಾಲೆಗಳಲ್ಲಿ ಆಟದ ಮೈದಾನ ಮತ್ತು ಆವರಣ ಗೋಡೆಗಳನ್ನು ನಿರ್ಮಾಣ, ಕೆರೆಗಳು ಮತ್ತು ಕಲ್ಯಾಣಿಗಳ ಪುನಶ್ಚೇತನಗೊಳಿಸಲಾಗುವುದು, ಜತೆಗೆ ಗ್ರಾಮಗಳ ಇತರ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗುವುದು ಎಂದು ಅಧ್ಯಕ್ಷರಾದ ಶಾರದಾ ರವರು ತಿಳಿಸಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ, ಉಪಾಧ್ಯಕ್ಷೆ ವನಜಾಕ್ಷಿ, ಸದಸ್ಯರಾದ ಸತೀಶ್, ಸೋಮಶೇಖರ್, ಮಧುಮಣಿ, ದೇವರಾಜ್, ಶ್ರುತಿ ಸುದೀಶ್ ಸೇರಿದಂತೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಿರೀಶ್ ಇದ್ದರು.